Saturday, April 19, 2025
Google search engine

Homeಅಪರಾಧಮಕ್ಕಳ ಕೈಯಲ್ಲಿ ಪೆನ್ನು ಬದಲು ತಲ್ವಾರ್ ಕೊಡಿ: ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಶಿವಾಚಾರ್ಯ ಸ್ವಾಮಿ ವಿರುದ್ಧ...

ಮಕ್ಕಳ ಕೈಯಲ್ಲಿ ಪೆನ್ನು ಬದಲು ತಲ್ವಾರ್ ಕೊಡಿ: ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಶಿವಾಚಾರ್ಯ ಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು

ಗುಲ್ಬರ್ಗಾ: ಮಕ್ಕಳ ಕೈಯಲ್ಲಿ ಪೆನ್ನು ಬದಲು ತಲ್ವಾರ್ ಕೊಡಿ ಎಂದು ವಕ್ಫ್ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಮರುಳಾರಾಧ್ಯ ಶಿವಾಚಾರ್ಯ ಸ್ವಾಮಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಬಿಜೆಪಿ ವಕ್ಫ್ ಹಠಾವೋ ದೇಶ ಬಚಾವೋ ಎಂದು ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆಯಲ್ಲಿ ಪೊಲೀಸರ ಮುಂದೆಯೇ, ‘ಜೀವ ಕೊಡುವುದಕ್ಕೂ, ಜೀವ ತೆಗೆಯುವುದಕ್ಕೂ ಸಿದ್ಧರಿದ್ದೀವಿ ಹುಷಾರ್.. ಯುವಕರ ಮನೆಯಲ್ಲಿ ತಲ್ವಾರ್ ಇವೆ. ಎಲ್ಲರ ಮನೆಯಲ್ಲಿ ಎಲ್ಲ ಇದೆ. ಯಾರ್ ಬರುತ್ತಾರೆ ಅವರನ್ನು ತಲ್ವಾರ್ ನಿಂದ ಕಡಿಯುತ್ತೇವೆ. ಇನ್ಮುಂದೆ ನಾವು ಮಕ್ಕಳ ಕೈಯಲ್ಲಿ ಪೆನ್ನು ಕೊಡುವುದರ ಬದಲು ತಲ್ವಾರ್ ಕೊಡೋಣ’ ಎಂದು ಸ್ವಾಮಿ ಹೇಳಿಕೆ ನೀಡಿದ್ದರು.

ಸ್ವಾಮಿಯ ಹೇಳಿಕೆಯ ಆಧಾರದ ಮೇಲೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆ ಕಾಯಿದೆ 299, 353/2 ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶವಿಟ್ಟುಕೊಂಡಿದ್ದಾರೆ ಎಂದು ಎಫ್ ಐಆರ್ ದಾಖಲಾಗಿದೆ.

RELATED ARTICLES
- Advertisment -
Google search engine

Most Popular