Friday, April 18, 2025
Google search engine

Homeರಾಜ್ಯಮಂಡ್ಯದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಆಯ್ಕೆ

ಮಂಡ್ಯದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಆಯ್ಕೆ

ಮಂಡ್ಯ: ನಗರದಲ್ಲಿ ಡಿಸೆಂಬರ್.20, 21, 22ರಂದು ಮಂಡ್ಯದಲ್ಲಿ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನಾಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

2024ರ ಡಿಸೆಂಬರ್ 20. 21, 22ರಂದು ಮಂಡ್ಯದಲ್ಲಿ ಜರುಗಲಿರುವ  87ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಅವರು ಆಯ್ಕೆಯಾಗಿರುತ್ತಾರೆ.

ಕಳೆದ ಎರಡು ದಿನಗಳ ಹಿಂದೆ ಮಂಡ್ಯ ನಗರದ ಹೊರವಲಯದಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ಹಮ್ಮಿಕೊಂಡಿದ್ದ ಮಂಡ್ಯ ಜಿಲ್ಲೆಯ ಸಾಹಿತಿಗಳ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಮಂಡ್ಯದ ಆತಿಥ್ಯ, ಸತ್ಕಾರವನ್ನು ಎಲ್ಲರೂ ನೆನೆಯಬೇಕು. ಆ ನಿಟ್ಟಿನಲ್ಲಿ ಸಮ್ಮೇಳನ ಯಶಸ್ವಿಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಮಂಡ್ಯಕ್ಕೆ ತನ್ನದೇ ಆದ ಸೊಗಡಿದೆ. ವೈಶಿಷ್ಟ್ಯ ಇದೆ. ನೂರಕ್ಕೆ ನೂರು ಈ ಸಮ್ಮೇಳನ ಯಶಸ್ವಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಚಿವರು, ಎಲ್ಲರ ಸಲಹೆ, ಮಾರ್ಗದರ್ಶನ, ಅಭಿಪ್ರಾಯ ಪಡೆಯಲಾಗುತ್ತಿದೆ. ಜನಸಾಮಾನ್ಯರಾದಿಯಾಗಿ ಎಲ್ಲರ ಸಲಹೆಗಳನ್ನು ಸ್ವೀಕರಿಸಿ, ಸಮಿತಿಯೊಂದಿಗೆ ಚರ್ಚಿಸಿ ಕಾರ್ಯರೂಪಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಸಾಹಿತ್ಯ ಸಮ್ಮೇಳನದ ಕುರುಹು ಉಳಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು. ಕಲಾಮಂದಿರ ದುರಸ್ತಿ ಕಾರ್ಯ ವಾರದಲ್ಲಿ ಪೂರ್ಣಗೊಳ್ಳಲಿದೆ. ಅಂಬೇಡ್ಕರ್ ಭವನ ರೆಡಿಯಾಗಲಿದೆ. ರೈತ ಭವನಕ್ಕೆ ಚಾಲನೆ ನೀಡಲಾಗಿದೆ. ಶಿವಪುರ ಧ್ವಜ ಸತ್ಯಾಗ್ರಹ ಪ್ರತಿಷ್ಠಾನ ರಚನೆ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಸ್ಥಾಪನೆ ಮಾಡುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯ ಬಗ್ಗೆ ವಿಶೇಷ ಕಾಳಜಿ ಇದೆ. ಮೂವತ್ತು ವರ್ಷದಿಂದ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದೇನೆ.ಕೃಷಿ ವಿವಿ, ಸಕ್ಕರೆ ಕಾರ್ಖಾನೆ ಪುನರಾರಂಭಿಸಲಾಗಿದೆ. ನೂತನ ಸಕ್ಕರೆ ಕಾರ್ಖಾನೆ ಬಗ್ಗೆ ಸಂಪುಟದ ಚರ್ಚೆಗೆ ಕಳುಹಿಸಲಾಗಿದೆ. ಅಭಿವೃದ್ಧಿ ನಿರಂತರ, ಸಾಹಿತ್ಯ ಸಮ್ಮೇಳನ ವಿಶೇಷ. ಮೂವತ್ತು ವರ್ಷಗಳ ನಂತರ ನಡೆಯುತ್ತಿರುವ ಈ ಸಮ್ಮೇಳನವನ್ನು ವಿಜೃಂಭಣೆಯಿಂದ, ಅರ್ಥಪೂರ್ಣವಾಗಿ ನೆರವೇರಿಸಲಾಗುವುದು. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

RELATED ARTICLES
- Advertisment -
Google search engine

Most Popular