ಮಂಗಳೂರು (ದಕ್ಷಿಣ ಕನ್ನಡ): ಧರ್ಮಸ್ಥಳ ದೇವಸ್ಥಾನದ ವಠಾರದಲ್ಲಿ ಚಿನ್ನಾಭರಣ ಕಳವು ಪ್ರಕರಣದ ಆರೋಪಿಯಾಗಿರುವ ತಾಯಿ ಹಾಗೂ ಪುತ್ರಿಯನ್ನು ಬಂಧಿಸಲಾಗಿದೆ. ಬಂಧಿತರನ್ನು ಹುಬ್ಬಳ್ಳಿ ನಗರದ ಸಟಲ್ಮೆಂಟ್ ನಿವಾಸಿ ಬಿ.ಬಿ.ಜಾನ್(59) ಮತ್ತು ಆಕೆಯ ಮಗಳು ಆರತಿ @ಮಸಾಬಿ @ ಅಸ್ಮಾ (34) ಎಂದು ಗುರುತಿಸಲಾಗಿದೆ.
ದಿನಾಂಕ 03-05-2025 ರಂದು ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ಲತಾ ಎಂಬುವರ ಬ್ಯಾಗ್ ನಲ್ಲಿ ಇರಿಸಿದ್ದ 6,79,000 ರೂಪಾಯಿ ಮೌಲ್ಯದ 97ಗ್ರಾಂ ಚಿನ್ನಾಭರಣವನ್ನು ಕಳವು ಮಾಡಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ 17-2025 ಕಲಂ 303(2) BNS 2023 ರಂತೆ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ತನಿಖೆ ನಡೆಸಿದಾಗ ಈ ಇಬ್ಬರು ಆರೋಪಿಗಳು ದಿನಾಂಕ:23.11.2025ರಂದು ಮತ್ತೆ ಕಳ್ಳತನ ಮಾಡಲು ಬರುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳದ ದ್ವಾರಕ ಬಳಿ ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ, ಮುಂದಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದು, ವಿಚಾರಣೆ ನಡೆಸಲ್ಸಿ ಆರೋಪಿಗಳ ಹುಬ್ಬಳಿ ಮನೆಯಿಂದ ಕಳ್ಳತನ ಮಾಡಿದ ಸುಮಾರು 5,32,000 ಸಾವಿರ ಮೌಲ್ಯದ 76 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಪ್ರಕರಣ ಪತ್ತೆ ಕಾರ್ಯದಲ್ಲಿ ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ ನಿರೀಕ್ಷಕರು ಬಿ ಜಿ ಸುಬ್ಬಪುರ್ ಮಠ್ ರವರ ತಂಡದಲ್ಲಿ ಧರ್ಮಸ್ಥಳ ಪೊಲೀಸ್ ಉಪನಿರೀಕ್ಷಕರಾದ ಸಮರ್ಥ್ ಆರ್ ಗಾಣಿಗೇರ, ಸಿಬ್ಬಂದಿ ಹೆಚ್ ಸಿ 607 ರಾಜೇಶ್, ಹೆಚ್ ಸಿ 1016 ಪ್ರಶಾಂತ್, ಹೆಚ್ ಸಿ 862 ಸಂದೀಪ್, ಪಿಸಿ 2293 ಮಲ್ಲಿಕಾರ್ಜುನ್, ಪಿಸಿ 2522 ಶಶಿಕುಮಾರ್, ಪಿಸಿ 441 ಮಂಜುನಾಥ್ ಪಾಟೀಲ್, ಮಹೆಚ್ ಸಿ 731 ಪ್ರಮೋದಿನಿ, ಮಹೆಚ್ ಸಿ 904ಸುನಿತಾ, ಮಪಿಸಿ 1954 ಸೌಭಾಗ್ಯ, ಮಪಿಸಿ 514 ದೀಪಾ, ಮಪಿಸಿ 515 ಉಷಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.



