Thursday, April 3, 2025
Google search engine

Homeರಾಜ್ಯಮಹಿಳೆಯರಿಗೆ ಸಿಹಿಸುದ್ದಿ; ಯುಗಾದಿ, ರಂಜಾನ್ ಹಬ್ಬಕ್ಕೆ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮಹಿಳೆಯರಿಗೆ ಸಿಹಿಸುದ್ದಿ; ಯುಗಾದಿ, ರಂಜಾನ್ ಹಬ್ಬಕ್ಕೆ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಯುಗಾದಿ, ರಂಜಾನ್ ಹಬ್ಬಕ್ಕೆ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಒಂದು ಕಂತಿನ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ನೀಡುವ 2,000 ರೂ. ಸಹಾಧನದ ಒಂದು ಕಂತಿನ ಹಣ ಬಿಡುಗಡೆ ಮಾಡಲಾಗುವುದು, ಈಗಾಗಲೇ ಹಣ ಬಿಡುಗಡೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ಯುಗಾದಿ, ರಂಜಾನ್ ಹಬ್ಬಕ್ಕೆ ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷ ಬದ್ಧತೆಗೆ ಹೆಸರಾಗಿರುವ ಪಕ್ಷ. ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಅತಿ ದೊಡ್ಡ ಯೋಜನೆಯಾಗಿದೆ. 1.22 ಕೋಟಿ ಫಲಾನುಭಗಳಿಗೆ ಇದುವರೆಗೂ 34 ಸಾವಿರ ಕೋಟಿ ರೂಪಾಯಿ ಹಣವನ್ನು ಹಾಕಲಾಗಿದೆ. ಈ ಯೋಜನೆಯನ್ನು ಜಾರಿಗೆ ತಂದಿರುವುದಕ್ಕೆ ನನಗೆ ಹೆಮ್ಮೆಯಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

RELATED ARTICLES
- Advertisment -
Google search engine

Most Popular