Saturday, April 19, 2025
Google search engine

Homeರಾಜ್ಯಯುಗಾದಿ ನಂತರ‌ ಒಳ್ಳೆ ಮಳೆ-ಬೆಳೆ, ಧಾರ್ಮಿಕ ಮುಖಂಡನ ಸಾವಾಗಲಿದೆ: ಕೋಡಿಶ್ರೀ ಭವಿಷ್ಯ

ಯುಗಾದಿ ನಂತರ‌ ಒಳ್ಳೆ ಮಳೆ-ಬೆಳೆ, ಧಾರ್ಮಿಕ ಮುಖಂಡನ ಸಾವಾಗಲಿದೆ: ಕೋಡಿಶ್ರೀ ಭವಿಷ್ಯ

ಕೋಲಾರ: ಯುಗಾದಿ ಕಳೆದ ನಂತರ‌ ರಾಜ್ಯದಲ್ಲಿ ಒಳ್ಳೆ ಮಳೆ -ಬೆಳೆಯಾಗುವ ಲಕ್ಷಣಗಳಿವೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಸದ್ಯ ಮಳೆ-ಬೆಳೆ ಇಲ್ಲದೇ ಕಂಗಾಲಾಗಿರುವ ರೈತರಿಗೆ ಒಂದು ಸಮಾಧಾನಕರ ಭವಿಷ್ಯವೊಂದನ್ನು ಹೇಳಿದ್ದಾರೆ. ಅಲ್ಲದೇ ಬಾಂಬ್ ಸ್ಫೋಟ, ಭೂಕಂಪ ಆಗುತ್ತೆ. ಧಾರ್ಮಿಕ ಮುಖಂಡನ ಸಾವು ಸಹ ಆಗಲಿದೆ ಎಂದು ಆಘಾತಕಾರಿ ಭವಿಷ್ಯ ನುಡಿದಿದ್ದಾರೆ.

ಕೋಲಾರದ ಜಿಲ್ಲೆ‌ ಮಾಲೂರು ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಕೋಡಿ ಮಠದ ಡಾ.ಶಿವನಂದ‌ ಶಿವಯೋಗಿ ಸ್ವಾಮೀಜಿ, ಯುಗಾದಿ ಕಳೆದ ನಂತರ‌ ರಾಜ್ಯದಲ್ಲಿ ಒಳ್ಳೆ ಮಳೆ-ಬೆಳೆ ಯಾಗುವ ಲಕ್ಷಣಗಳಿವೆ ಎಂದು ಭವಿಷ್ಯ ನುಡಿದರು. ಇನ್ನು ಇದೇ ವೇಳೆ ರಾಜ್ಯ ರಾಜಕೀಯ ಬಗ್ಗೆ ಯುಗಾದಿ ಕಳೆದ ನಂತರ ಹೇಳುವೆ, ಇನ್ನ ಸಾಕಷ್ಟು ಸಮಯವಿದೆ ಎಂದರು.

ಗ್ಯಾರೆಂಟ್ ಗಳಿಂದ‌ ಸರ್ಕಾರ ನಡೆಯುತ್ತಿದ್ದೀಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, ನನಗಿಂತ ನಿಮಗೆ ಚೆನ್ನಾಗಿ ಗೊತ್ತು. ರಾಷ್ಟ್ರ ರಾಜಕಾರಣ ಸಹ ಯುಗಾದಿ ಮೇಲೆ ಗೊತ್ತಾಗುತ್ತದೆ. ಯುಗಾದಿ ನಂತರ‌ ಭವಿಷ್ಯ ಬರುವುದು. ಒಂದು ತಿಂಗಳು ಕಳೆದ ಮೇಲೆ ಮಳೆ,ಬೆಳೆ, ರಾಜಕೀಯ, ದುಡಿಮೆ, ವ್ಯಾಪಾರ ಎಲ್ಲಾ ಗೊತ್ತಾಗಲಿದೆ ಎಂದು ಹೇಳಿದರು.

ಜಾಗತಿಕ ಮಟ್ಟದಲ್ಲಿ ತೊಂದರೆ ಇದೆ. ಬೆಂಕಿ ಹಾವಳಿ,ನೀರಿನ ಹಾವಳಿ, ಯುದ್ದ‌ ಆಗುತ್ತೆ. ಅನೇಕ‌ ಸಾವು ನೋವುಗಳು ಆಗುತ್ತೆ. ಮತದಂಧೆ ಹೆಚ್ಚಾಗುತ್ತದೆ. ಬಾಂಬ್ ಸ್ಫೋಟ, ಭೂಕಂಪ ಆಗುತ್ತೆ. ಧಾರ್ಮಿಕ ಮುಖಂಡನ ಸಾವು ಸಹ ಆಗಲಿದೆ ಎಂದು ಸ್ಫೋಟಕ ಭವಿಷ್ಯ ನುಡಿದರು.

RELATED ARTICLES
- Advertisment -
Google search engine

Most Popular