ಚಾಮರಾಜನಗರ: ಮಾಜಿ ರಾಜ್ಯಪಾಲ ದಿ.ಬಿ.ರಾಚಯ್ಯ ಅವರ ಪತ್ನಿ ಗೌರಮ್ಮ (87 ವರ್ಷ) ಶುಕ್ರವಾರ ಬೆಳಿಗ್ಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಗೌರಮ್ಮ ಅವರಿಗೆ ಪುತ್ರರಾದ ಕೊಳ್ಳೇಗಾಲ ಶಾಸಕ ಎ. ಆರ್.ಕೃಷ್ಣಮೂರ್ತಿ, ಜಿಪಂ ಮಾಜಿ ಸದಸ್ಯ ಆರ್. ಬಾಲರಾಜು ಹಾಗೂ ಐವರು ಪುತ್ರಿಯರು ಇದ್ದಾರೆ.
ಗೌರಮ್ಮ ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಮೈಸೂರಿನ ಸರಸ್ವತಿಪುರಂ ನಲ್ಲಿರುವ 9ನೇ ಮುಖ್ಯ ರಸ್ತೆಯಲ್ಲಿರುವ ಶಾಸಕ ಎ. ಆರ್. ಕೃಷ್ಣಮೂರ್ತಿ ಅವರ ನಿವಾಸದಲ್ಲಿ ಇಂದು ಮಧ್ಯಾಹ್ನ 3 ಗಂಟೆ ವರೆಗೆ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು.
ಬಳಿಕ ಶುಕ್ರವಾರ ಸಂಜೆ ಚಾಮರಾಜನಗರ ತಾಲೂಕಿನ ಆಲೂರಿನ ಅವರ ತೋಟಕ್ಕೆ ತರಲಾಗುವುದು. ಶನಿವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಬಿ ರಾಚಯ್ಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಗುರುವಾಗಿದ್ದರು. ಅವರ ಪತ್ನಿ ಗೌರಮ್ಮ ಅವರು ನಾವು ಅವರ ಮನೆಗೆ ಹೋದಾಗಲೆಲ್ಲ ತಾವೇ ಕೈಯಾರೆ ಅಡುಗೆ ಮಾಡಿ ಬಡಿಸುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲ ತಿಂಗಳ ಹಿಂದೆ ಆಲೂರಿನಲ್ಲಿ ನಡೆದ ಸಮಾರಂಭದಲ್ಲಿ ನೆನಪಿಸಿಕೊಂಡಿದ್ದರು.