Wednesday, August 20, 2025
Google search engine

Homeರಾಜ್ಯಪರಿಶಿಷ್ಟ ಜಾತಿಯೊಳಗಿನ ಒಳ ಮೀಸಲಾತಿಗೆ ಸರ್ಕಾರದಿಂದ ಮಂಜೂರು: ನಾಗಮೋಹನ್ ದಾಸ್ ಸಮಿತಿ ಶಿಫಾರಸು ಪರಿಷ್ಕರಿಸಿ ಜಾರಿಗೆ...

ಪರಿಶಿಷ್ಟ ಜಾತಿಯೊಳಗಿನ ಒಳ ಮೀಸಲಾತಿಗೆ ಸರ್ಕಾರದಿಂದ ಮಂಜೂರು: ನಾಗಮೋಹನ್ ದಾಸ್ ಸಮಿತಿ ಶಿಫಾರಸು ಪರಿಷ್ಕರಿಸಿ ಜಾರಿಗೆ ನಿರ್ಧಾರ

ಬೆಂಗಳೂರು: ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿ ನೀಡಬೇಕು ಎಂಬ ಕೂಗಿಗೆ ರಾಜ್ಯ ಸರ್ಕಾರ ಕೊನೆಗೂ ಮನ್ನಣೆ ಹಾಕಿದೆ. ಒಳ ಮೀಸಲಾತಿ ಕುರಿತ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ಸಮಿತಿ ವರದಿಯನ್ನು ಅಲ್ಪ ಪ್ರಮಾಣದಲ್ಲಿ ಪರಿಷ್ಕರಿಸಿ ಜಾರಿ ಮಾಡಲು ನಿರ್ಧರಿಸಿದೆ.

ಒಳಮೀಸಲಾತಿ ಜಾರಿ ಕುರಿತು ಕರೆಯಲಾಗಿದ್ದ ಸಚಿವ ಸಂಪುಟದ ವಿಶೇಷ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

101 ಪರಿಶಿಷ್ಟ ಜಾತಿಗಳನ್ನು ಮೂರು ಗುಂಪುಗಳಾಗಿ ವಿಭಜಿಸಲಾಗಿದೆ. ಎಡಗೈ, ಬಲಗೈ ಮತ್ತು ಸ್ಪಶ್ಯ ಎಂದು ವರ್ಗೀಕರಿಸಿ ಪರಿಶಿಷ್ಟ ಜಾತಿಗೆ ಶೇ. 17 ರಷ್ಟಿರುವ ಮೀಸಲಾತಿಯನ್ನು ಎಡಗೈ ಮತ್ತು ಬಲಗೈ ಗುಂಪಿಗೆ ಸೇರಿರುವ ಜಾತಿಗಳಿಗೆ ತಲಾ ಶೇ. 6, ಕೊರಚ, ಕೊರಮ, ಭೋವಿ, ಲಂಬಾಣಿ ಜಾತ ಒಳಗೊಂಡ ʼಸ್ಪೃಶ್ಯ’ ಗುಂಪುಗಳಿಗೆ ಶೇ 5 ಮೀಸಲಾತಿ ಹಂಚಿಕೆ ಮಾಡಲು ಸಂಪುಟದಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಪರಿಶಿಷ್ಟ ಜಾತಿಯಲ್ಲಿ 101 ಮೂಲ ಜಾತಿಗಳನ್ನು ಆಯೋಗವು ಐದು ಗುಂಪುಗಳಾಗಿ ವರ್ಗೀಕರಿಸಿ, ಲಭ್ಯವಿರುವ ಈ ಮೀಸಲಾತಿಯನ್ನು ಪ್ರವರ್ಗ ‘ಎ’ಗೆ ಶೇ. 1 (ಒಟ್ಟು ಜಾತಿಗಳು 59 ಜಾತಿಗಳು), ಪ್ರವರ್ಗ ‘ಬಿ’ಗೆ ಶೇ. 6 (18 ಜಾತಿಗಳು ಪ್ರವರ್ಗ ‘ಸಿ’ಗೆ ಶೇ. 5 (17 ಜಾತಿಗಳು), ಪ್ರವರ್ಗ ‘ಡಿ’ಗೆ ಶೇ. 4 (4 ಜಾತಿಗಳು), ಪ್ರವರ್ಗ ‘ಇ’ಗೆ ಶೇ. 1ರಂತೆ (3 ಜಾತಿಗಳು).

ಎರಡು ಮೂರು ದಿನದಲ್ಲಿ ಒಳಮೀಸಲಾತಿ ಸಂಬಂಧ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ.

ದಲಿತ ಎಡಗೈ ಜಾತಿಗಳಿಗೆ ಸೇರಿರುವ ಪಂಗಡಗಳು: ಭಾಂಬಿ, ಅಸದರು, ಅಸೋಡಿ, ಚಮಡಿಯಾ, ಚಮರ್, ಚಂಬರ, ಚಮಗಾರ, ಹರಳಯ್ಯ, ಹರಳಿ, ಖಾಲ್ಪ, ಮಚಿಗಾರ, ಮೋಚಿಗಾರ, ಮಾದರ, ಮಾದಿಗ, ಮೋಚಿ, ಮುಚ್ಚಿ, ತೆಲುಗು ಮೋಚಿ, ಕಾಮತಿ ಮೋಚಿ, ರಾಣಿಗಾರ್, ರೋಹಿದಾಸ್, ರೋಹಿತ್, ಸಮ್ಗರ್, ಹಕ್ಕಳಯ್ಯ, ಧೋರ್ಕ, ಹಕ್ಕಳಯ್ಯ, ಧೋರ್ಕಾ ಹಲಸ್ವರ, ಹಸ್ಲ, ಕಡಯ್ಯನ್, ಕೆಪ್ಮರಿಸ್, ಕೊಲುಪುಲ್ವಂಡಿಯು, ಕುಟುಂಬನ್, ಮಾದಿಗ, ಮಾವಿಲನ್, ಮೊಗೇರ್, ಪಂಚಮ, ಪನ್ನಿಯಾಂಡಿ, ಪರಯ್ಯನ್, ಪರಯ, ಸಮಗಾರ, ಸಾಂಬನ್

ದಲಿತ ಬಲಗೈ ಜಾತಿಗಳಿಗೆ ಸೇರಿರುವ ಪಂಗಡಗಳು: ಅಣಮುಕ್, ಅರೆ ಮಾಳ, ಅರವ ಮಾಳ, ಬಲಗೈ, ಛಲವಾದಿ, ಚಲವಾದಿ, ಚನ್ನಯ್ಯ, ಪಲ್ಲನ್, ಹೊಲಯ, ಹೊಲೆಯ, ಹೊಲೆಯ, ಮಹ್ಯವಂಶಿ, ಧೇಡ್, ವಂಕರ್, ಮಾರು ವಂಕರ್, ಮಾಳ, ಮಲ ಹಣ್ಣಾಯಿ, ಮಾಳ ಜಂಗಮ, ಮಾಳ ಮಾಸ್ತಿ, ಮಲ ಮಾರಾಟ, ನೆಟ್ಕಣಿ, ಮಹಾರ್, ತರಲ್, ಧೇಳು, ದೇಗುಲ ಮೇಗುಂದ,ಆದಿ ಆಂಧ್ರ, ಆದಿ ದ್ರಾವಿಡ, ಆದಿ ಕರ್ನಾಟಕ.

ಬಕುಡ, ಬಂಜಾರ, ಲಂಬಾಣಿ, ಲಂಬಾಡ, ಲಂಬಾಡಿ, ಲಮಾಣಿ, ಸುಗಾಲಿ, ಸುಕಾಲಿ; ಭೋವಿ, ಓಡ್, ಒಡ್ಡೆ, ವಡ್ಡರ, ವಡ್ಡರ, ವಡ್ಡರ, ವಡ್ಡರ, ಕಲ್ಲುವಡ್ಡರ, ಬೋವಿ (ಬೆಸ್ತರಲ್ಲದ), ಮಣ್ಣುವಡ್ಡರ; ಎಲ್ಲಮಾಳ್ವಾರ್, ಯೆಲ್ಲಮ್ಮಲವಾಂಡ್ಲು; ಕೊರಚ, ಕೊರಚಾರ್; ಕೊರಮ, ಕೊರವ, ಕೊರವರ; ಲಿಂಗಾಡರ್; ಮುಕ್ರಿ; ಮುಂಡಾಲ; ಪಂಬದ; ಸಪಾರಿ; ತಿರ್ಗರ್, ತಿರ್ಬಂದ.

ಅಲೆಮಾರಿಗಳ ವಿರೋಧ:

ಒಳಮೀಸಲಾತಿ ಹಂಚಿಕೆಯನ್ನು ಬಲಗೈ ಹಾಗೂ ದಲಿತ ಎಡಗೈ ಸಮುದಾಯಗಳು ಒಪ್ಪಿಕೊಂಡಿವೆ. ಆದರೆ ಅಲೆಮಾರಿ ಗುಂಪುಗಳು ಅಸಮಾಧಾನ ವ್ಯಕ್ತಪಡಿಸಿವೆ. ಇತರೆ ಸಮುದಾಯಗಳ ಜತೆ ತಮ್ಮನ್ನು ಸೇರ್ಪಡೆ ಮಾಡಿರುವುದಕ್ಕೆ ಆಕ್ರೋಶ ಹೊರಹಾಕಿದ್ದಾರೆ. ಇತರೆ ಸಮುದಾಯಗಳ ಜತೆ ತಮ್ಮನ್ನು ಸೇರ್ಪಡೆಗೊಳಿಸಿದ್ದಾರೆ. ಬಂಜಾರ, ಲಂಬಾಣಿ ಬೋವಿ ಸಮುದಾಯಗಳ ಜತೆ ಹೋರಾಟ ನಡೆಸಿ ಮೀಸಲಾತಿ ಸೌಲಭ್ಯ ಪಡೆಯುವುದು ಕಷ್ಟ ಸಾಧ್ಯ ಎಂದು ಅಲೆಮಾರಿ ಗುಂಪುಗಳ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular