Friday, April 18, 2025
Google search engine

Homeರಾಜ್ಯಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಸರ್ಕಾರ ಬದ್ಧ: ಸಿಎಂ ಸಿದ್ಧರಾಮಯ್ಯ

ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಸರ್ಕಾರ ಬದ್ಧ: ಸಿಎಂ ಸಿದ್ಧರಾಮಯ್ಯ

ಬೆಳಗಾವಿ: ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಮಟ್ಟವನ್ನು ಆರ್.ಎಲ್. 519.60 ಮೀ. ನಿಂದ 524.26 ಮೀ. ರವರೆಗೆ ಎತ್ತರಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಇಂದು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ರಡಿ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಮಟ್ಟವನ್ನು ಆರ್.ಎಲ್. 519.60 ಮೀ. ನಿಂದ 524.26 ಮೀ. ರವರೆಗೆ ಎತ್ತರಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಹಂತ ಹಂತವಾಗಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು ಎಂದರು.

ಯೋಜನೆಗಾಗಿ ಮುಳುಗಡೆ ಹೊಂದಲಿರುವ ಜಮೀನು, ಪುನರ್ವಸತಿ ಹಾಗೂ ಕಾಲುವೆ ನಿರ್ಮಾಣಕ್ಕಾಗಿ ಅಂದಾಜು ಒಟ್ಟಾರೆ 1,33,867 ಎಕರೆ ಜಮೀನು ಸ್ವಾಧೀನಪಡಿಸಬೇಕಾಗಿದೆ. – ಇದುವರೆಗೆ 28,967 ಎಕರೆ ಸ್ವಾಧೀನಪಡಿಸಲಾಗಿದ್ದು, 1,04,963 ಎಕರೆ ಸ್ವಾಧೀನಪಡಿಸಲು ಬಾಕಿಯಿದೆ ಎಂದು ತಿಳಿಸಿದರು.  ಜಲಾಶಯದ ಹಿನ್ನೀರಿನಿಂದ ಮುಳುಗಡೆಯಾಗಲಿರುವ 188 ಗ್ರಾಮಗಳಿಗೆ ಸಂಬಂಧಿಸಿದಂತೆ 73,020 ಎಕರೆ ಜಮೀನು ಭೂಸ್ವಾಧೀನಕ್ಕೆ ಬಾಕಿಯಿದೆ.  2022ರಲ್ಲಿ ಅಂದಿನ ಸರ್ಕಾರ ಮುಳುಗಡೆಯಾಗುವ ಜಮೀನನ್ನು ಎರಡು ಹಂತದಲ್ಲಿ ಭೂಸ್ವಾಧೀನಪಡಿಸುವ ನಿರ್ಧಾರ ಕೈಗೊಂಡಿತ್ತು. ಇದನ್ನು ಬದಲಾಯಿಸಿ ಈಗ ಪ್ರಥಮ ಪ್ರಾಶಸ್ತ್ಯದಲ್ಲಿ ಒಂದೇ ಹಂತದಲ್ಲಿ ಈ ಜಮೀನು ಭೂಸ್ವಾಧೀನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಮೀನು ಕಳೆದುಕೊಳ್ಳುವ ರೈತರಿಗೆ ಜಮೀನಿನ ಮಾರುಕಟ್ಟೆ ದರ, ಆಸ್ತಿಯ ಮಾರ್ಗದರ್ಶಿ ಮೌಲ್ಯ, ಭೂಸ್ವಾಧೀನ ಕಾಯ್ದೆಯನ್ನು ಗಮನದಲ್ಲಿರಿಸಿ ನ್ಯಾಯಯುತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ. ರೈತರಿಗಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಮೀನಿಗೆ ಪರಿಹಾರ ನೀಡುವ ಕುರಿತು ಸಹಮತದ ದರ ನಿಗದಿಪಡಿಸಲು ಎಲ್ಲರೂ ಮುಂದೆ ಬರಬೇಕು. ರೈತರಿಗೂ ಅನ್ಯಾಯವಾಗಬಾರದು, ಸರ್ಕಾರಕ್ಕೂ ಹೊರೆಯಾಗದಂತೆ ನಿರ್ಣಯಕ್ಕೆ ಬರಲಾಗುವುದು ಎಂದು ಹೇಳಿದರು.

ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ 20ಸಾವಿರ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಈ ಪ್ರಕರಣಗಳನ್ನು ಹಿಂಪಡೆದುಕೊಂಡು ಸಹಮತದ ಮೂಲಕ ಬಗೆಹರಿಸಲು ಪ್ರಯತ್ನಿಸಬೇಕು ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular