Thursday, April 3, 2025
Google search engine

HomeUncategorizedರಾಷ್ಟ್ರೀಯಜಮ್ಮು,ಕಾಶ್ಮೀರದಿಂದ ಭಯೋತ್ಪಾದನೆ ನಿರ್ಮೂಲನೆ ಮಾಡಲು ಸರ್ಕಾರ ಬದ್ಧ : ಅಮಿತ್ ಶಾ

ಜಮ್ಮು,ಕಾಶ್ಮೀರದಿಂದ ಭಯೋತ್ಪಾದನೆ ನಿರ್ಮೂಲನೆ ಮಾಡಲು ಸರ್ಕಾರ ಬದ್ಧ : ಅಮಿತ್ ಶಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, ಜಮ್ಮು ಮತ್ತು ಕಾಶ್ಮೀರದಿಂದ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಶಾ ಹೇಳಿದರು.

ಶೂನ್ಯ ಒಳನುಸುಳುವಿಕೆ’ ಸಾಧಿಸುವ ಗುರಿಯೊಂದಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ವಿರುದ್ಧದ ಹೋರಾಟವನ್ನು ತೀವ್ರಗೊಳಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಎಲ್ಲಾ ಭದ್ರತಾ ಸಂಸ್ಥೆಗಳಿಗೆ ನಿರ್ದೇಶನ ನೀಡಿದ ವೇಳೆ ಅವರು ಈ ಹೇಳಿಕೆ ನೀಡಿದರು.

ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿಯ ಕುರಿತು ಎರಡು ದಿನಗಳಲ್ಲಿ ಇಲ್ಲಿ ನಡೆದ ಎರಡು ಉನ್ನತ ಮಟ್ಟದ ಪರಿಶೀಲನಾ ಸಭೆಗಳ ಅಧ್ಯಕ್ಷತೆಯನ್ನು ವಹಿಸಿದ ಅವರು, ನರೇಂದ್ರ ಮೋದಿ ಸರ್ಕಾರದ ನಿರಂತರ ಮತ್ತು ಸಂಘಟಿತ ಪ್ರಯತ್ನಗಳಿಂದಾಗಿ ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದನೆಯ ವ್ಯವಸ್ಥೆ ದುರ್ಬಲಗೊಂಡಿದೆ ಎಂದು ಹೇಳಿದ್ದಾರೆ.

ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್, ಗುಪ್ತಚರ ಬ್ಯೂರೋ ನಿರ್ದೇಶಕ ತಪನ್ ಡೇಕಾ, ಡಿಜಿಪಿ ನಳಿನ್ ಪ್ರಭಾತ್, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮತ್ತು ಇತರ ಉನ್ನತ ಸೇನಾ, ಪೊಲೀಸ್ ಮತ್ತು ನಾಗರಿಕ ಅಧಿಕಾರಿಗಳು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular