ನವದೆಹಲಿ : 85 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ತೆರೆಯಲು ಕ್ಯಾಬಿನೆಟ್ ಅನುಮೋದನೆ ನೀಡುವುದರೊಂದಿಗೆ ಶಾಲಾ ಶಿಕ್ಷಣವನ್ನು ಸಾಧ್ಯವಾದಷ್ಟು ಸುಲಭಗೊಳಿಸಲು ತಮ್ಮ ಸರ್ಕಾರ ಮತ್ತೊಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಶನಿವಾರ ಹೇಳಿದ್ದಾರೆ.
ಈ ಕ್ರಮವು ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿಗೆ ಪ್ರಯೋಜನವನ್ನ ನೀಡುತ್ತದೆ, ಆದರೆ ಅನೇಕ ಹೊಸ ಉದ್ಯೋಗಾವಕಾಶಗಳನ್ನ ಸಹ ಸೃಷ್ಟಿಸುತ್ತದೆ ಎಂದು ಅವರು ಪ್ರತಿಪಾದಿಸಿದರು.
ಶಾಲಾ ಶಿಕ್ಷಣವನ್ನು ಸಾಧ್ಯವಾದಷ್ಟು ಸುಲಭಗೊಳಿಸಲು ನಮ್ಮ ಸರ್ಕಾರ ಮತ್ತೊಂದು ದೊಡ್ಡ ನಿರ್ಧಾರವನ್ನ ತೆಗೆದುಕೊಂಡಿದೆ. ಇದರ ಅಡಿಯಲ್ಲಿ ದೇಶಾದ್ಯಂತ 85 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ತೆರೆಯಲಾಗುವುದು. ಈ ಕ್ರಮವು ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿಗೆ ಪ್ರಯೋಜನವನ್ನು ನೀಡುತ್ತದೆ, ಅನೇಕ ಹೊಸ ಉದ್ಯೋಗಾವ ಕಾಶಗಳನ್ನು ಸಹ ಸೃಷ್ಟಿಸುತ್ತದೆ ” ಎಂದು ಮೋದಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಸಮಾಜದ ಪ್ರತಿಯೊಂದು ವರ್ಗಕ್ಕೂ ಶಾಲಾ ಶಿಕ್ಷಣವನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ಹೇಳಿದರು.