ಮೈಸೂರು: ಜಿಲ್ಲಾಡಳಿತ, ಜಿ.ಪಂ ಮೊದಲಾದವುಗಳ ಸಂಯುಕ್ತಾಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮಾ.೧೨ ಮತ್ತು ೧೩ರಂದು ನಗರದ ಚಾಮುಂಡಿ ವಿಹಾರ ಕ್ರೀಡಾಂಗಣಗಳಲ್ಲಿ ನಡೆಯಲಿದೆ ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ಜೆ.ಗೋವಿಂದರಾಜು ತಿಳಿಸಿದರು.
ಮಾ.೧೨ರಂದು ಬೆಳಗ್ಗೆ ೧೦ಕ್ಕೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಉದ್ಘಾಟನೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಇನ್ನಿತರರು ಅತಿಥಿಗಳಾಗಿರುವರು. ಬಳಿಕ, ಚಾಮುಂಡಿ ವಿಹಾರ ಕ್ರೀಡಾಂಗಣ ಸೇರಿದಂತೆ ವಿವಿಧ ಕ್ರೀಡಾಂಗಣಗಳಲ್ಲಿ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ. ಮಾ.೧೩ರ ಸಂಜೆ ೪ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.