ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಡಿ. ೧೧ ಬುಧವಾರ ರಾಜ್ಯದಲ್ಲಿ ಸರಕಾರಿ ರಜೆ ಘೋಷಿಸಲಾಗಿದೆ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವ ನಗರದಲ್ಲಿರುವ ಎಸ್.ಎಂ.ಕೃಷ್ಣ ಅವರ ನಿವಾಸದಲ್ಲಿ ಬುಧವಾರ ಬೆಳಗ್ಗೆ ೮ರವರೆಗೆ ಅಂತಿಮ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ. ೧೦:೩೦ ರಿಂದ ಮದ್ದೂರಿನಲ್ಲಿ ಸಾರ್ವಜನಿಕರಿಗಾಗಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು. ಬಳಿಕ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಅಂತ್ಯ ಸಂಸ್ಕರಾ ನೆರವೇರಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಮೂರು ದಿನಗಳ ಕಾಲ ಶೋಕಾಚರಣೆ: ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಡಿ.೧೦ರಿಂದ ೧೨ರವರೆಗೆ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿ ಸರಕಾರ ಅಧಿಸೂಚನೆ ಹೊರಡಿಸಿದೆ.ಶೋಕಾಚರಣೆ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ತಿಳಿಸಿದೆ.
ಎಸ್.ಎಂ.ಕೃಷ್ಣರ ಅಂತ್ಯಕ್ರಿಯೆಯು ಡಿ.೧೧ರಂದು ಅವರ ಹುಟ್ಟುರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.