Sunday, January 11, 2026
Google search engine

Homeರಾಜ್ಯವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು : ಸಿಎಂ ಸಿದ್ದರಾಮಯ್ಯ

ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು : ಸಿಎಂ ಸಿದ್ದರಾಮಯ್ಯ

ವಿಜಯಪುರ: ವಿಜಯಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕೆಂದು ಹಿಂದಿನ ಸರ್ಕಾರ ಪಿಪಿಪಿ ಮಾದರಿಯಲ್ಲಿ ಕೈಗೊಳ್ಳಬೇಕು ಎಂದು ಚಿಂತಿಸಿತ್ತು. ಮುಂದಿನ ದಿನಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಿಳಿಸಿದ್ದು, ಈ ಕುರಿತು ವಿಜಯಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದರು.

ಈ ವೇಳೆ ದೇವರಾಜ ಅರಸು ಅವರ 7 ವರ್ಷ 239 ದಿನಗಳ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿದ್ದ ದಾಖಲೆಯನ್ನು ಮುರಿದು ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಮಾಡಲು ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ. ಅದಕ್ಕಾಗಿ ರಾಜ್ಯದ ಜನತೆಗೆ ಕೃತಜ್ಞತೆ ತಿಳಿಸಿದರು.

ಬಳಿಕ ವಿಜಯಪುರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಆರು ಕ್ಷೇತ್ರಗಳನ್ನು ಗೆದ್ದಿದ್ದು, ಚುನಾವಣೆಯಲ್ಲಿ 135 ಕ್ಷೇತ್ರಗಳಲ್ಲಿ ಗೆಲ್ಲಬೇಕಾದರೆ ವಿಜಯಪುರ ಜನರ ಆಶೀರ್ವಾದ ಬಹಳ ಮುಖ್ಯ ಪಾತ್ರ ವಹಿಸಿದೆ. 45 ವರ್ಷಗಳಿಂದ ಇಡೀ ರಾಜ್ಯ ಸುತ್ತಾಡಿದ್ದೇನೆ. ವಿಜಯಪುರ ಜಿಲ್ಲೆಯ ಜನ ಆಶೀರ್ವಾದ ನನ್ನ ಮೇಲಿದೆ. ವಿಜಯಪುರ ಜಿಲ್ಲೆಯಲ್ಲಿ ರೂ.800 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ರೂ.82 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ರೂ.730 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ ಮಾಡಲಾಗಿದೆ ಎಂದಿದ್ದಾರೆ.

ಇನ್ನೂ ರಾಣಿ ಚನ್ನಮ್ಮ ಪ್ರತಿಮೆ ಲೋಕಾರ್ಪಣೆ ಸೇರಿದಂತೆ ಕಿತ್ತೂರು ರಾಣಿ ಚೆನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲಾಗಿದ್ದು, ಈ ಭಾಗದಲ್ಲಿ ಸೈಕ್ಲಿಸ್ಟ್ ಗಳಿಗಾಗಿ ದಕ್ಷಿಣ ಭಾರತದಲ್ಲಿಯೇ ಮೊದಲ ವೆಲೊಡ್ರೋಮ್‌ನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ನಂತರ ವಿಜಯಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕೆಂದು ಹಿಂದಿನ ಸರ್ಕಾರ ಪಿಪಿಪಿ ಮಾದರಿಯಲ್ಲಿ ಕೈಗೊಳ್ಳಬೇಕೆಂದು ಚಿಂತಿಸಿತ್ತು. ಮುಂದಿನ ದಿನಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು. ರಾಜ್ಯದಲ್ಲಿ 71 ವೈದ್ಯಕೀಯ ಕಾಲೇಜುಗಳಿದ್ದು ಈ ಪೈಕಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. ಉಳಿದ ಜಿಲ್ಲೆಗಳಲ್ಲಿಯೂ ಟ್ರಾಮಾ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಅಲ್ಲದೆ ಬಸನಗೌಡ ಯತ್ನಾಳ್ ಅವರು ಅನೇಕ ಬೇಡಿಕೆಗಳನ್ನಟ್ಟಿದ್ದು, ಕನಕದಾಸ ವೃತ್ತದಿಂದ ಅಂಬೇಡ್ಕರ್ ಹಾಗೂ ಶಿವಾಜಿ ವೃತ್ತದವರೆಗೆ ರೂ.160 ಕೋಟಿ ವೆಚ್ಚದ ಮೂರು ಕಿಮೀ ಮೇಲ್ಸೇತುವೆ ಮಾಡಬೇಕೆಂದು ಮನವಿ ಮಾಡಿದ್ದಾರೆ, ಅದನ್ನು ಶೀಘ್ರದಲ್ಲೇ ನೆರವೇರಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್, ಶಿವಾನಂದ್ ಪಾಟೀಲ್, ಬಿ.ಎಸ್. ಸುರೇಶ್, ರಾಮಲಿಂಗಾ ರೆಡ್ಡಿ, ಲಕ್ಷ್ಮಿ ಹಬ್ಬಾಳ್ಕರ್ ಸೇರಿದಂತೆ ಇತರ ಸಚಿವರು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular