ಮಂಡ್ಯ: ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ ಎಂಬ ವಿನೂತನ ಕಾರ್ಯಕ್ರಮವನ್ನು ಮೇಲುಕೋಟೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣಯ್ಯ ಆರಂಭಿಸಿದ್ದಾರೆ.
ಇಂದಿನಿಂದ ಸತತ 15 ದಿನಗಳ ಕಾಲ ಕಾರ್ಯಕ್ರಮ ನಡೆಯಲಿದ್ದು, ಇಂದು ಪಾಂಡವಪುರ ತಾಲೂಕಿನ ಕೆನ್ನಾಳು ಗ್ರಾಮದಲ್ಲಿ ವಿನೂತನ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಲಾಗಿದೆ.
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪ್ರತಿ ಹಳ್ಳಿಗಳಲ್ಲೂ ಕಾರ್ಯಕ್ರಮ ನಡೆಯಲಿದೆ.
ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅಲೆಯುವುದನ್ನ ತಪ್ಪಿಸಲು, ಮನೆ ಬಾಗಿಲಿಗೆ ಸರ್ಕಾರಿ ಸೇವೆಗಳನ್ನ ಒದಗಿಸುವ ಕಾರ್ಯಕ್ರಮ ಇದಾಗಿದೆ.
ಹಳ್ಳಿ ಹಳ್ಳಿಗಳಿಗೆ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಕರೆದೊಯ್ಯುವುದು. ಸ್ಥಳದಲ್ಲೇ ಸಾರ್ವಜನಿಕರ ಕುಂದು-ಕೊರತೆ ಆಲಿಸಿ, ಪರಿಹಾರಕ್ಕೆ ಕ್ರಮವಹಿಸಲಾಗುವುದು. ಹಳ್ಳಿಗಳಲ್ಲೇ ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳನ್ನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು.