ಮಂಡ್ಯ: ಚಂದಗಾಲು ಗ್ರಾ.ಪಂ.ನಲ್ಲಿ ‘ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ’ ಎಂಬ ಕಾರ್ಯಕ್ರಮ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ನಡೆಯುತ್ತಿದೆ.
ಮುಂದುವರಿದ ಭಾಗವಾಗಿ ಚಂದಗಾಲು ಪಂಚಾಯತ್ ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ವಿನೂತನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಗ್ರಾಮದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ಸ್ಥಳದಲ್ಲೇ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಒದಗಿಸುತ್ತಿದ್ದಾರೆ.
ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟು ಶಾಸಕರು ಜನರ ಅಹವಾಲು ಸ್ವೀಕರಿಸಿದರು.
ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಇ ಸ್ವತ್ತು ಸೇರಿದಂತೆ ಹಲವಾರು ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿದ್ದೇವೆ. ಸಾರ್ವಜನಿಕರು ಕಚೇರಿಗೆ ಅಲೆಯುವದನ್ನ ತಪ್ಪಿಸಲು ಕಾರ್ಯಕ್ರಮ ನಡೆಯುತ್ತಿದೆ. ಯಾವುದೇ ಸಮಸ್ಯೆಗಳು ಇದ್ದರು ಸರಿಪಡಿಸುತ್ತೇವೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.