Saturday, April 19, 2025
Google search engine

Homeರಾಜ್ಯರಾಜ್ಯದಲ್ಲಿ ಬಾಣಂತಿಯರ ಸಾವನ್ನ ತಡೆಯಲು ಸರ್ಕಾರ ಸೂಕ್ತ ಕ್ರಮ ವಹಿಸಬೇಕು: ಹೆಚ್.ಡಿ ಕುಮಾರಸ್ವಾಮಿ

ರಾಜ್ಯದಲ್ಲಿ ಬಾಣಂತಿಯರ ಸಾವನ್ನ ತಡೆಯಲು ಸರ್ಕಾರ ಸೂಕ್ತ ಕ್ರಮ ವಹಿಸಬೇಕು: ಹೆಚ್.ಡಿ ಕುಮಾರಸ್ವಾಮಿ

ಹಾಸನ: ಕರ್ನಾಟಕದಲ್ಲಿ ಬಾಣಂತಿಯರ ಸಾವನ್ನು ತಡೆಯಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಒತ್ತಾಯಿಸಿದರು.

ಹಾಸನದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಿನ್ನೆಯೂ ಒಬ್ಬ ಬಾಣಂತಿ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಬಾಣಂತಿಯರ ಸಾವಿನ ಸಂಖ್ಯೆ ಹೆಚ್ಚಾಗಿದ್ದು, ಇದನ್ನು ತಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಆಸ್ಪತ್ರೆಗಳಲ್ಲಿ ಅಗತ್ಯ ವೈದ್ಯರು ಮತ್ತು ಸಿಬ್ಬಂದಿಯನ್ನು ನಿಯೋಜನೆ ಮಾಡಬೇಕು ಎಂದು ಆಗ್ರಹಿಸಿದರು.

ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಅವರನ್ನು ಬಂಧಿಸಿದ್ದಾಗ ಪೊಲೀಸರು ಮಾನಸಿಕ ಹಿಂಸೆ ನೀಡಿದ್ದಾರೆ. ಅವರನ್ನು ರಾತ್ರಿ ಇಡೀ ಸುತ್ತಾಡಿಸದೇ ನೇರವಾಗಿ ನ್ಯಾಯಾಲಯಕ್ಕೆ ಹಾಜರು ಪಡಿಸುವ ಅವಕಾಶ ಇತ್ತು. ಆದರೆ ಒಬ್ಬ ರಾಜಕಾರಣಿಯ ನಿರ್ದೇಶನದಂತೆ ಎಲ್ಲವೂ ನಡೆದಿದೆ. ರಾಜಕೀಯ ವೈಷಮ್ಯದಿಂದ ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದರು.

RELATED ARTICLES
- Advertisment -
Google search engine

Most Popular