Monday, April 7, 2025
Google search engine

Homeರಾಜ್ಯಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಸರ್ಕಾರದಿಂದ ಪರಿಹಾರ ಹಣ ನಿಗದಿ

ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಸರ್ಕಾರದಿಂದ ಪರಿಹಾರ ಹಣ ನಿಗದಿ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಮಳೆಯಿಂದ ಮನೆಗಳು ಹಾನಿಗೊಳಗಾಗುತ್ತಿರುವ ಹಿನ್ನೆಲೆ ಹಾನಿಗೊಳಗಾದ ಮನೆಗಳಿಗೆ ಸರ್ಕಾರ ಪರಿಹಾರ ಹಣ ನಿಗದಿಪಡಿಸಿದೆ. ಮನೆಗಳ ಪುನರ್ ನಿರ್ಮಾಣ, ದುರಸ್ತಿ ಕಾರ್ಯ, ಪ್ರವಾಹದಿಂದ ಗೃಹೋಪಯೋಗಿ ವಸ್ತು ಕಳೆದುಕೊಂಡರೆ ಅಂತವರಿಗೂ ಪರಿಹಾರ ನೀಡಲಾಗುತ್ತಿದೆ.

ಅತೀ ಸಣ್ಣ ಪ್ರಮಾಣದಲ್ಲಿ ಮನೆಗೆ ಹಾನಿಯಾಗಿದ್ದರೆ 6,500 ಸಾವಿರ ರೂ., ಮಧ್ಯಮ ಪ್ರಮಾಣದಲ್ಲಿ ಮನೆ ಹಾನಿಯಾಗಿದ್ದರೆ 25 ಸಾವಿರ, ಶೇ.75ರಷ್ಟು ಮನೆ ಹಾನಿಯಾಗಿದ್ದರೆ 50 ಸಾವಿರ ಮತ್ತು ಮನೆಗೆ ಸಂಪೂರ್ಣ ಹಾನಿಯಾಗಿದ್ದರೆ 1.20 ಲಕ್ಷ ರೂ. ಪರಿಹಾರ ದರ ನಿಗದಿ ಮಾಡಲಾಗಿದೆ.

ಜೊತೆಗೆ ಹೆಚ್ಚುವರಿಯಾಗಿ ವಸತಿ ಇಲಾಖೆಯ ದೇವರಾಜ ಅರಸು ವಸತಿ ಯೋಜನೆ ಅಡಿ ಮನೆ ಹಂಚಿಕೆ ಪತ್ರ ವಿತರಣೆ, ಮನೆ ಹಾನಿ ಪ್ರಮಾಣ ಪರಿಶೀಲನೆಗೂ ನಿಗದಿಯ ಮಾರ್ಗಸೂಚಿ ಅನುಸರಿಸಲು ಸರ್ಕಾರ ಆದೇಶ ಹೊರಡಿಸಿದೆ. ಅತಿವೃಷ್ಟಿ, ಪ್ರವಾಹದಿಂದ ಮನೆಯ ಗೋಡೆಗಳೊಂದಿಗೆ ಮೇಲ್ಛಾವಣಿ ಕುಸಿತ (ಶೇ 75% ಕ್ಕಿಂತ ಹೆಚ್ಚು) ಹಾನಿಯಾದ ಮನೆಗಳನ್ನು ಸಂಫೂರ್ಣ ಹಾನಿಯಾದ ಮನೆಯೆಂದು ಪರಿಗಣಿಲಾಗುತ್ತದೆ.

ಮನೆಹಾನಿಯ ಪ್ರಮಾಣವನ್ನು ಗ್ರಾಮ ಆಡಳಿತಾಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸಹಾಯಕ ಅಭಿಯಂತರರು, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ ಇವರುಗಳ ಜಂಟಿಯಾಗಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸಬೇಕು. ನಿಗದಿಪಡಿಸಿರುವ ಕಾಲಮಿತಿಯೊಳಗೆ ನಿಯಮಾನುಸಾರ ಅರ್ಹ ಸಂತ್ರಸ್ಥರಿಗೆ ಪರಿಹಾರ ಪಾವತಿಸಲು ಕ್ರಮಕೈಗೊಳ್ಳುವಂತೆ ತಿಳಿಸಲಾಗಿದೆ.

ಭಾಗಶಃ ಮನೆ ಹಾನಿಗಾಗಿ 50 ಸಾವಿರ ರೂ. ಗಳ ವರೆಗೆ ಪಾವತಿಸಲಾಗುವ ಮನೆ ಹಾನಿ ಪರಿಹಾರ ಪಡೆಯುವ ಸಂತ್ರಸ್ಥರ ವಿವರಗಳಾದ, ಹಾನಿಯಾದ ಮನೆಯ ಜಿ.ಪಿ.ಎಸ್. ಛಾಯಾಚಿತ್ರ, ಆರ್.ಆರ್. ಸಂಖ್ಯೆ ಮತ್ತು ಆಧಾರ್ ಸಂಖ್ಯೆಯನ್ನು ಆರ್​​ಜಿಆರ್​ಹೆಚ್​​ಚಿಎಲ್​ ಪರಿಹಾರ ತಂತ್ರಾಂಶದಲ್ಲಿ ದಾಖಲಿಸಲು ಜಿಲ್ಲಾಧಿಕಾರಿಗಳು ಕ್ರಮವಹಿಸುವಂತೆ ಸೂಚಿಸಲಾಗಿದೆ.

RELATED ARTICLES
- Advertisment -
Google search engine

Most Popular