ಮೈಸೂರು: ‘ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವಿಗೆ ಸರ್ಕಾರದ ನಿರ್ಲಕ್ಷ್ಯ ಕಾರಣ. ಆರೋಗ್ಯ ಸಚಿವರು ಮತ್ತು ಅಧಿಕಾರಿಗಳ ಬೇಜವಾಬ್ದಾರಿಯಿಂದ ಈ ಸಾವು ಸಂಭವಿಸಿವೆ’ ಎಂದು ಬಿಜೆಪಿ ನಗರ ಉಪಾಧ್ಯಕ್ಷರಾದ ಹೇಮಾನಂದೀಶ್ ಆರೋಪಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ‘ಕಾಂಗ್ರೆಸ್ ಸರ್ಕಾರ ಹೆಚ್ಚಿನ ಕಮಿಷನ್ ಆಸೆಗಾಗಿ ಕಪ್ಪು ಪಟ್ಟಿಯಲ್ಲಿರುವ ಕಂಪನಿಗಳಿಂದ ಔಷಧ ಖರೀದಿಸಿ ಸರ್ಕಾರಿ ಆಸ್ಪತ್ರೆಗಳಿಗೆ ಸರಬರಾಜು ಮಾಡುವ ಮೂಲಕ ಬಾಣಂತಿಯರು, ಹಸುಗೂಸುಗಳು ಹಾಗೂ ಬಡಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ’ ಎಂದು ಆಗ್ರಹಿಸಿದ್ದಾರೆ.
‘ ಕುಟುಂಬಸ್ಥರಿಗೆ ಪರಿಹಾರ ನೀಡಬೇಕು. ಔಷಧ ಖರೀದಿ ತನಿಖೆಯಾಗಬೇಕು. ಪ್ರಕರಣಗಳಲ್ಲಿ ಭಾಗಿಯಾದ ಅಧಿಕಾರಿಗಳನ್ನು ಅಮಾನತು ಮಾಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.