ಸರ್ಕಾರ ನಿಗದಿಪಡಿಸಿದಂತೆ ಇಂದು ಜನವರಿ 22ರಿಂದ 31ರವರೆಗೆ ವಿಧಾನ ಮಂಡಲ ವಿಶೇಷ ಅಧಿವೇಶನ ಕರೆದಿತ್ತು. ಇಇಂದಿನಿಂದ ಆರಂಭವಾಗ್ತಿರುವ ರಾಜ್ಯ ವಿಧಾನಸಭೆ–ವಿಧಾನಪರಿಷತ್ ಜಂಟಿ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರು ಭಾಗವಹಿಸಿದ್ದರು. ಅದರ ಪ್ರಕಾರ ಇಂದು ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಿ ಕಲಾಪ ಆರಂಭವಾಗಬೇಕಿತ್ತು.
ಆದರೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ, ಸ್ಪೀಕರ್ ಮತ್ತು ಇತರರಿಗೆ ಶುಭಾಶಯ ಸೇರಿದಂತೆ ಕೇವಲ 2 ಸಾಲುಗಳನ್ನು ಮಾತನಾಡಿ, ಆದರೆ ಸರ್ಕಾರದ ಭಾಷಣಕ್ಕೆ ರಾಜ್ಯಪಾಲರು ವಿರೋಧ ವ್ಯಕ್ತ ಪಡಿಸಿದ್ದು, ಇಡೀ ಭಾಷಣವನ್ನು ಓದದೆ ಹೊರನಡೆದಿದ್ದಾರೆ. ಇನ್ನೂ ಅಧಿವೇಶನದಲ್ಲಿ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡೇ ನಿಮಿಷ ಮಾತ್ರವೇ ಭಾಷಣ ಮಾಡಿ ಹೊರನಡೆದಿದ್ದಾರೆ.
ರಾಜ್ಯಪಾಲರ ನಡೆಯನ್ನು ಖಂಡಿಸಿ ಕಾಂಗ್ರೆಸ್ ಶಾಸಕರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಭಾಷಣ ಮಾಡಿದ ರಾಜ್ಯಪಾಲರು, ನನ್ನ ಸರ್ಕಾರವು ರಾಜ್ಯದ ಅರ್ಥಿಕ, ಸಾಮಾಜಿಕ, ಭೌತಿಕ ಅಭಿವೃದ್ಧಿಯನ್ನು ದ್ವಿಗುಣ ಮಾಡಲು ಬದ್ಧವಾಗಿದೆ. ಜೈ ಹಿಂದ್, ಜೈ ಕರ್ನಾಟಕ ಎಂದಷ್ಟೇ ಹೇಳಿ, ಭಾಷಣ ಮುಗಿಸಿದ್ದಾರೆ.
ರಾಜ್ಯಪಾಲರು ಭಾಷಣ ಪೀಠದಿಂದ ಕೆಳಗಿಳಿದು ಬಂದಾಗ, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ರಾಜ್ಯಪಾಲರಿಗೆ ಧಿಕ್ಕಾರ ಕೂಗಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರನ್ನು ಅಡ್ಡಗಟ್ಟಿ ಭಾಷಣ ಓದುವಂತೆ ಕೇಳಿಕೊಂಡಿದ್ದಾರೆ.



