Friday, April 11, 2025
Google search engine

Homeರಾಜಕೀಯರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ರೀತಿ ವರ್ತಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ರೀತಿ ವರ್ತಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ಪ್ರಾಸಿಕ್ಯೂಷನ್ ಹಿಂದೆ ದೊಡ್ಡ ರಾಜಕೀಯ ಷಡ್ಯಂತ್ರ ನಡೆದಿದೆ. ಹೈಕಮಾಂಡ್, ಸಂಪೂರ್ಣ ಕ್ಯಾಬಿನೆಟ್, ಸರ್ಕಾರ, ಎಲ್ಲ ಶಾಸಕರು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಕಾನೂನು ಹೋರಾಟ ಮಾಡುತ್ತೇವೆ ನಾವು ಅದರ ವಿರುದ್ಧ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡುತ್ತೇವೆ. ರಾಜಭವನವನ್ನು ರಾಜಕೀಯ ದಾಳವಾಗಿ ಉಪಯೋಗಿಸಲಾಗುತ್ತಿದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ರೀತಿ ವರ್ತಿಸುತ್ತಿದ್ದಾರೆ ಎಂದು ಕೇಂದ್ರ ಮತ್ತು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಸಿಎಂ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡುವುದನ್ನು ನಾನು ನಿರೀಕ್ಷೆ ಮಾಡಿದ್ದೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರತಿಪಕ್ಷಗಳು ಪ್ರಯತ್ನ ಮಾಡುತ್ತಿವೆ. ಇದನ್ನು ಧಿಕ್ಕರಿಸಿ ಕಾನೂನು ಹೋರಾಟ ಮಾಡುತ್ತೇವೆ ಎಂದರು.

ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದೆ. ನಾನು ರಾಜೀನಾಮೆ ಕೊಡುವ ಪ್ರಶ್ನೆ ಉದ್ಭವವಾಗುವುದಿಲ್ಲ. ರಾಜೀನಾಮೆ ಕೊಡುವ ತಪ್ಪು ನಾನು ಮಾಡಿಲ್ಲ ಎಂದರು.

ಚುನಾಯಿತ ಸರ್ಕಾರವನ್ನು ಕಿತ್ತು ಹಾಕಲು ಅನೇಕ ರಾಜ್ಯಗಳಲ್ಲಿ ಷಡ್ಯಂತರ ರೂಪಿಸಲಾಗಿದೆ. ಬಿಜೆಪಿ, ಜೆಡಿಎಸ್, ಬೇರೆಯವರಲ್ಲ ಸೇರಿಕೊಂಡು ನಮ್ಮ ಸರ್ಕಾರವನ್ನು ಕೆಳಗಿಳಿಸಲು ಪ್ರಯತ್ನಪಡುತ್ತಿದ್ದಾರೆ ಎಂದರು.

RELATED ARTICLES
- Advertisment -
Google search engine

Most Popular