ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ಕಾಮಗಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಕಲ್ಪಿಸುವಂತ ಮಸೂಧೆಗೆ ಸದನದಲ್ಲಿ ಅಂಗೀಕಾರ ನೀಡಲಾಗಿತ್ತು. ಈ ಮಸೂಧೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಆದರೇ 2ನೇ ಬಾರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಕಿತ ನೀಡದೇ ವಾಪಾಸ್ ಕಳುಹಿಸಿದ್ದಾರೆ.
ರಾಜ್ಯ ಸರ್ಕಾರ ಕಳುಹಿಸಿದ್ದಂತ ವಿಧೇಯಕ ಮತ್ತೆ ರಾಜ್ಯಪಾಲರು ಹಿಂದಿರುಗಿಸಿದ್ದಾರೆ. ರಾಜ್ಯಪಾಲರು ಸರ್ಕಾರಿ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವಂತ ಮಸೂದೆಯನ್ನು ವಾಪಾಸ್ ಕಳುಹಿಸಿದ್ದರು. ಆ ಬಳಿಕ ಸ್ಪಷ್ಟೀಕರಣದೊಂದಿಗೆ ವಿಧೇಯಕ ಮರು ಸಲ್ಲಿಕೆ ಮಾಡಲಾಗಿತ್ತು.
ಆದರೇ ಹಿಂದಿನ ನಿರ್ಧಾರ ಮರುಪರಿಶೀಲನೆಗೆ ರಾಜ್ಯಪಾಲರು ಒಪ್ಪದೇ ಇದೀಗ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ವಿಧೇಯಕವನ್ನು ವಾಪಾಸ್ ಕಳುಹಿಸಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾದಂತೆ ಆಗಿದೆ.