ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೋನಾ ಸೋಂಕು ತಗುಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು ಸದ್ಯ ರಾಜಭವನದಲ್ಲಿ ಕ್ವಾರಂಟೈನ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ರಾಜ್ಯಪಾಲರ ಆರೋಗ್ಯ ಸ್ಥಿರವಾಗಿದ್ದು, ಮುಂದಿನ ದಿನಾಂಕದವರೆಗೆ ರಾಜ್ಯಪಾಲರ ನಿಗದಿತ ಕಾರ್ಯಕ್ರಮಗಳು ರದ್ದುಗೊಂಡಿವೆ.
ಈ ಕುರಿತು ರಾಜಭವನದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೋವಿಡ್-19 ಪರೀಕ್ಷೆಗೆ ಒಳಪಟ್ಟಿದ್ದರು. ಅವರ ಪರೀಕ್ಷೆ ವರದಿಯಲ್ಲಿ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ತಿಳಿದು ಬಂದಿದೆ ..
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್-19 ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟ ಕಾರಣ, ಮುಂದಿನ ದಿನಾಂಕದವರೆಗೆ ಅವರ ಎಲ್ಲಾ ನಿಗದಿತ ಕಾರ್ಯಕ್ರಮಗಳನ್ನು ರದ್ದುಗೊಳಿಸಿರೋದಾಗಿ ತಿಳಿಸಿದೆ.