Monday, April 21, 2025
Google search engine

Homeರಾಜ್ಯರಾಜ್ಯಪಾಲರು ಬಿಜೆಪಿ ಅಧ್ಯಕ್ಷರಂತೆ ಕೆಲಸ ಮಾಡುತ್ತಿದ್ದಾರೆ: ಬಿ.ಕೆ. ಹರಿಪ್ರಸಾದ್

ರಾಜ್ಯಪಾಲರು ಬಿಜೆಪಿ ಅಧ್ಯಕ್ಷರಂತೆ ಕೆಲಸ ಮಾಡುತ್ತಿದ್ದಾರೆ: ಬಿ.ಕೆ. ಹರಿಪ್ರಸಾದ್

ಮಂಗಳೂರು: ಪ್ರಸ್ತುತ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ ರಾಜ್ಯಪಾಲರು ಬಿಜೆಪಿ ಅಧ್ಯಕ್ಷರಂತೆ ಕೆಲಸ ಮಾಡುತ್ತಿದ್ದಾರೆ ಅನ್ನಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ರಾಜ ಭವನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸಂವಿಧಾನದ ಚೌಕಟ್ಟಿನಲ್ಲಿರುವ ರಾಜ್ಯಪಾಲ ಹುದ್ದೆಯಲ್ಲಿರುವವರು, ತಮ್ಮ ಚೌಕಟ್ಟನ್ನು ಬಿಟ್ಟು ಬಿಜೆಪಿ ನಿರ್ದೇಶನದಂತೆ ಕೆಲಸ ಮಾಡಲು ಆಗುವುದಿಲ್ಲ ಎಂದರು.

ಈ ಹಿಂದೆ ಬಿಜೆಪಿ ಆಪರೇಷನ್ ಕಮಲ ಮೂಲಕ ಸರ್ಕಾರವನ್ನು ಕೆಡವುತ್ತಿತ್ತು. ಆದರೆ ಈಗ ಬೇರೆ ವಾಮಮಾರ್ಗದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಯತ್ನ ಮಾಡ್ತಿದ್ದಾರೆ. ಸದ್ಯ ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ರಿಲೀಫ್ ಕೊಟ್ಟಿದೆ. ನ್ಯಾಯಾಂಗ ಹೋರಾಟ ಆಗುತ್ತಿದೆ ಎಂದು ಸಿಎಂ ಪರ ಬ್ಯಾಟ್ ಬೀಸಿದರು.

RELATED ARTICLES
- Advertisment -
Google search engine

Most Popular