ಬಾಗಲಕೋಟೆ: ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದನ್ನು ಸರ್ಕಾರ ಮಧ್ಯಪ್ರವೇಶಿಸಿ ವಿನಾಕಾರಣ ಗೊಂದಲ ಸೃಷ್ಠಿ ಮಾಡಿದೆ ಎಂದು ಸರ್ಕಾರದ ವಿರುದ್ಧ ಮಾಜಿ ಸಚಿವ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ಹಳೆ ಬಾಗಲಕೋಟೆ ನಗರದ ಚರಂತಿಮಠ ಕಲ್ಯಾಣ ಮಂಟಪದಲ್ಲಿ ನಡೆದ ಸಭೆ ಬಳಿಕ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿದ್ದು ಶಾಂತಿಯುತ ಹೋರಾಟಕ್ಕೆ ಸಜ್ಜಾಗಿದ್ದೇವೆ. ಆಗಸ್ಟ್ 19ರಂದು ಬಾಗಲಕೋಟೆ ನಗರದಲ್ಲಿ ಮೌನ ಮೆರವಣಿಗೆ ಆಯೋಜಿಸಲಾಗಿದ್ದು ಜಿಲ್ಲೆಯ ಒಂಬತ್ತು ತಾಲೂಕುಗಳಲ್ಲಿ ತಹಶೀಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದರು. ಶಾಂತಿಯುತವಾಗಿ ಸ್ವಯಂ ಪ್ರೇರಿತರಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಮೆರವಣಿಗೆಯಲ್ಲಿ ಭಾಗಿಯಾಗುವಂತೆ ವ್ಯಾಪಾರಸ್ಥರಿಗೆ ಮನವಿ ಮಾಡಲಾಗಿದೆ ಎಂದರು.
ನಂತರ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದನ್ನ ಸರ್ಕಾರ ಮಧ್ಯಪ್ರವೇಶಿಸಿ ವಿನಾಕಾರಣ ಗೊಂದಲ ಸೃಷ್ಟಿಯನ್ನು ಉಂಟು ಮಾಡಿದ್ದು ಸರ್ಕಾರ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ ಎನ್ನುವುದನ್ನು ಹೇಳಿಕೊಳ್ಳುತ್ತಿದ್ದಾರೆ. ಇನ್ನು ಮುಂದೆ ಆರನೇ ಗ್ಯಾರಂಟಿ ಕೂಡ ಬರುತ್ತೆ ಆ ಗ್ಯಾರಂಟಿ ಇಡೀ ರಾಜ್ಯವನ್ನು ಕಾಂಗ್ರೆಸ್ಸಿಗರು ಕತ್ತಲೆಯಲ್ಲಿ ಇಡುತ್ತಾರೆ ಎಂದು ಸರ್ಕಾರದ ವಿರುದ್ಧ ಮಾಜಿ ಸಚಿವ ವಾಗ್ದಾಳಿ ನಡೆಸಿದರು ಸಭೆಯಲ್ಲಿ ವಿವಿಧ ಹಿಂದೂ ಪರ ಸಂಘಟನೆಗಳ ಮುಖಂಡರು ಹಾಗೂ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ, ಮಾಜಿ ಎಂ.ಎಲ್.ಸಿ ನಾರಾಯಣಸಾ ಭಾಂಡಗೆ ಹಾಗೂ ಬಿಜೆಪಿ ಪ್ರಮುಖರು ಭಾಗವಹಿಸಿದ್ದು ಶಾಂತಿಯುತ ಹೋರಾಟಕ್ಕೆ ತೀರ್ಮಾನ ಕೈಗೊಳ್ಳಲಾಯಿತು.

…