Friday, April 18, 2025
Google search engine

Homeರಾಜ್ಯಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಸಚಿವ ಈಶ್ವರ ಖಂಡ್ರೆ

ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಸಿನಿಮಾ, ಧಾರಾವಾಹಿ, ಸಾಕ್ಷ್ಯಚಿತ್ರ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸ್ಪಷ್ಟ ಸೂಚನೆ ನೀಡಿರುವ ಸಚಿವರು ಚಲನಚಿತ್ರ ದೂರದರ್ಶನ, ಸಾಕ್ಷ್ಯಚಿತ್ರೀಕರಣಕ್ಕೆ ಸಂಬಂಧಿತ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕ ಕಟ್ಟಿಸಿಕೊಂಡು ಅನುಮತಿ ನೀಡುತ್ತಿದ್ದಾರೆ. ಇದಲ್ಲದೆ ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳು ಅನುಮತಿ ನೀಡುತ್ತಿರುವುದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿ ಹೊರ ಜಗತ್ತಿಗೆ ಲಭಿಸುವ ಸಂಭವ ಇರುತ್ತದೆ. ಇದು ಪರಿಸರ ಹಾಗೂ ಜೀವ ವೈವಿಧ್ಯಕ್ಕೂ ತರುತ್ತದೆ ಎಂದು ತಿಳಿಸಿದ್ದಾರೆ.

ಅರಣ್ಯ ಹಾಗೂ ವನ್ಯ ಜೀವಿಗಳನ್ನು ಸಂರಕ್ಷಿಸಿ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಅರಣ್ಯ ಹಾಗೂ ವನ್ಯಜೀವಿಗಳನ್ನು ಉಳಿಸುವ ಹಿತದೃಷ್ಟಿಯಿಂದ, ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ವತಿಯಿಂದ ಅನುಮತಿ ಪಡೆಯಬೇಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

RELATED ARTICLES
- Advertisment -
Google search engine

Most Popular