Thursday, December 18, 2025
Google search engine

Homeರಾಜ್ಯಸುದ್ದಿಜಾಲವಲಸೆ ಬಂದ ಹಕ್ಕಿಯಲ್ಲಿ ಜಿಪಿಎಸ್‌ ಟ್ರ್ಯಾಕರ್‌ ಪತ್ತೆ : ಚೀನಾದ ಗೂಢಚರ್ಯೆ ಶಂಕೆ?

ವಲಸೆ ಬಂದ ಹಕ್ಕಿಯಲ್ಲಿ ಜಿಪಿಎಸ್‌ ಟ್ರ್ಯಾಕರ್‌ ಪತ್ತೆ : ಚೀನಾದ ಗೂಢಚರ್ಯೆ ಶಂಕೆ?

ಕಾರವಾರ : ಇಲ್ಲಿನ ಕಡಲ ತೀರ ಭಾಗದ ತಿಮ್ಮಕ್ಕ ಗಾರ್ಡನ್ ಹಿಂಭಾಗದಲ್ಲಿ ಕೂತಿದ್ದ ಸೀಗಲ್ ಹಕ್ಕಿಯ ಬೆನ್ನಿನ ಭಾಗದಲ್ಲಿ ಚೀನಾದ ಜಿಪಿಎಸ್ ಟ್ರ‍್ಯಾಕರ್ ಪತ್ತೆಯಾಗಿದ್ದು, ಇದರಿಂದ ಕಾರವಾರದ ನೌಕಾನೆಲೆಯ ಬಗ್ಗೆ ಇದೀಗ ಚೀನಾ ಗೂಢಚರ್ಯೆ ನಡೆಸುತ್ತಿದೆಯೇ ಅನ್ನೋ ಶಂಕೆ ವ್ಯಕ್ತವಾಗಿದೆ. ನೋಡಲು ಭಿನ್ನವಾಗಿ ಕಂಡ ಈ ಹಕ್ಕಿಯನ್ನ ನೋಡಿದ ಸ್ಥಳೀಯರು ಅರಣ್ಯ ಇಲಾಖೆಯ ಮರೈನ್ ವಿಭಾಗದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಇನ್ನೂ ಸ್ಥಳಕ್ಕೆ ಬಂದ ಅಧಿಕಾರಿಗಳು ಹಕ್ಕಿಯನ್ನ ಹಿಡಿದು ಪರಿಶೀಲಿಸಿದ್ದು, ಈ ವೇಳೆ ಸೀಗಲ್‌ನ ಬೆನ್ನಿನಲ್ಲಿದ್ದ ಜಿಪಿಎಸ್‌ನಲ್ಲಿ ಚೈನೀಸ್ ವಿಜ್ಞಾನ ಅಕಾಡೆಮಿಯ ರಿಸರ್ಚ್ ಸೆಂಟರ್ ಫಾರ್ ಇಕೋ-ಎನ್ವಿರಾನ್ಮೆಂಟಲ್ ಸೈನ್ಸ್ ವಿಳಾಸ ಪತ್ತೆಯಾಗಿದೆ. ಸೀಗಲ್ ಹಕ್ಕಿಗಳ ಚಲನ ವಲನ, ಆಹಾರ ಹಾಗೂ ವಲಸೆಯನ್ನು ಗುರುತಿಸಲು ಜಿಪಿಎಸ್ ಟ್ರ‍್ಯಾಕರ್ ಬಳಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸದ್ಯ ಅಧಿಕಾರಿಗಳು ಅಕಾಡೆಮಿಯ ಸಂಪರ್ಕಕ್ಕೆ ಪ್ರಯತ್ನಿಸುತ್ತಿದ್ದು, ಹಕ್ಕಿಯನ್ನು ಮರೈನ್ ಅರಣ್ಯ ವಿಭಾಗದ ಕಚೇರಿಯಲ್ಲಿ ಇರಿಸಲಾಗಿದೆ. ಕಳೆದ ವರ್ಷ ನವಂಬರ್‌ನಲ್ಲೂ ಕಾರವಾರ ಬೈತಕೋಲ್ ಬಂದರಿನ ಸರಹದ್ದು ವ್ಯಾಪ್ತಿಯಲ್ಲಿ ಟ್ರ್ಯಾಕರ್‌ ಅಳವಡಿಸಿದ ರಣ ಹದ್ದು ಪ್ರತ್ಯಕ್ಷವಾಗಿತ್ತು ಎನ್ನಲಾಗಿದೆ.

RELATED ARTICLES
- Advertisment -
Google search engine

Most Popular