ಮಂಡ್ಯ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ತಾಲ್ಲೂಕಿನ ಹಳೆಬೀಡು ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡಕ್ಕೆ ದೀಪಾಲಂಕಾರಕ್ಕೆ ಸಿದ್ಧತೆ ಮಾಡುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಒಬ್ಬ ಮೃತಪಟ್ಟಿದ್ದು,ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪಂಚಾಯಿತಿ ವಾಟರ್ ಮ್ಯಾನ್ ವೆಂಕಟೇಶ್ (41) ಮೃತರು.ಮತ್ತೋರ್ವ ಲೋಕೇಶ್ (38) ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.