Friday, April 4, 2025
Google search engine

Homeರಾಜ್ಯಸುದ್ದಿಜಾಲಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಪಾತ್ರ ಬಹು ಮುಖ್ಯ: ಅಶ್ರಫುಲ್ ಹಸನ್

ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಪಾತ್ರ ಬಹು ಮುಖ್ಯ: ಅಶ್ರಫುಲ್ ಹಸನ್

  • ವರದಿ: ಎಡತೊರೆ ಮಹೇಶ್

ಎಚ್ ಡಿ ಕೋಟೆ: ಗ್ರಾಮಗಳ ಸಮಗ್ರ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳ ಪಾತ್ರ ಶಾಸಕರು ಸಂಸದರುಗಳಿಗಿಂತಲೂ ಬಹು ಮುಖ್ಯವಾದದ್ದು ಎಂದು ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ನಿರ್ದೇಶಕರು ಮೈರಾಡ ಸಂಸ್ಥೆಯ ಮೈಸೂರು ವಿಭಾಗದ ಮುಖ್ಯಸ್ಥರಾದ ಶ್ರೀ ಅಶ್ರಫುಲ್ ಹಸನ್ ರವರು ಹೇಳಿದರು.

ಕರ್ನಾಟಕ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಗ್ರಾಮ ಪಂಚಾಯತ್ ಕಾರ್ಯಕರ್ತ ತಾಲೂಕಿನ ನಾಗಪುರ ಹಾಡಿ ಯಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ವಸತಿ ಸಹಿತ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದರು.

ಪಂಚಾಯತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಜನರ ಬದುಕನ್ನು ಹಸನು ಗೊಳಿಸುವ ನಿಟ್ಟಿನಲ್ಲಿ ಸರ್ಕಾರದ ಯೋಜನೆಗಳ ಜೊತೆಯಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದ ಮೂಲಕ ಜಾರಿಯಾಗುತ್ತಿರುವ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಬಳಸಿಕೊಂಡಲ್ಲಿ ಜನಪರ ನಾಯಕರಾಗಿ ಬೆಳೆಯಲು ಸಾಧ್ಯ ವಾಗುತ್ತದೆ,. ಮೈರಾಡ ಸಂಸ್ಥೆ ವತಿಯಿಂದ ಹಮ್ಮಿಕೊಳ್ಳಲಾಗುತ್ತಿರುವ ಕಾರ್ಯಕ್ರಮಗಳ ಪರಿಚಯಿಸುತ್ತಾ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳನ್ನು ಗ್ರಾಮ ಪಂಚಾಯಿತಿ ಸಹ ಭಾಗಿತ್ವದಲ್ಲಿ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಕರೆ ನೀಡಿದರು.

ಮೊದಲ ದಿನದ ಕಾರ್ಯಗಾರದಲ್ಲಿ ಅರಣ್ಯ ಇಲಾಖೆಗಳ ಕಾರ್ಯಕ್ರಮಗಳ ಕುರಿತು ವೀರನಹೊಸಳ್ಳಿ ವಲಯ ಅರಣ್ಯ ಅಧಿಕಾರಿಗಳಾದ ಶ್ರೀ ಅಭಿಷೇಕ್ ರವರು, ಮಾತನಾಡುತ್ತ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಗಟ್ಟು ವಲ್ಲಿ ಗ್ರಾಮ ಪಂಚಾಯತ್ ಜವಾಬ್ದಾರಿ ಯು ಬಹು ಮುಖ್ಯ ವಾಗಿದ್ದು ಇಲಾಖೆ ಯ ಜೊತೆಗೆ ನಿರಂತರ ಸಂಪರ್ಕ ಇಟ್ಟುಕೊಂಡು ಇಲಾಖೆ ಯಿಂದ ಸಿಗುವ ಸೌಲಭ್ಯ ಗಳನ್ನೂ ಅರ್ಹ ರಿಗೆ ತಲುಪಿಸುವಂತೆ ಕರೆ ನೀಡಿದರು.

ವ್ಯಕ್ತಿತ್ವ ವಿಕಸನದ ಕುರಿತಂತೆ ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಲಲಿತಾರವರು ಮಾತನಾಡಿ ಪಂಚಾಯತ್ ಸದಸ್ಯರು ತಮ್ಮ ವಯಕ್ತಿಕ ಜೀವನ ಕ್ಕಿಂತಲೂ ಹೆಚ್ಚು ಸಮಾಜ ಸೇವೆಗಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಹಲವು ಒತ್ತಡಗಳಿಗೆ ಒಳಗಾಗುವ ಸಾಧ್ಯತೆ ಇದೆ ಹಾಗಾಗಿ ವೈಯಕ್ತಿಕ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಬೇಕು ಈ ನಿಟ್ಟಿನಲ್ಲಿ ಮಾನಸಿಕ ವಾಗಿ ಗಟ್ಟಿಗೊಳ್ಳುವ ಒಳ್ಳೆಯ ಅಭ್ಯಾಸಗಳನ್ನು ರೂಡಿಸಿಕೊಂಡು ಮಾದರಿ ನಾಯಕರಾಗಬೇಕೆಂದು ಹೇಳುತ್ತಾ ಹಲವು ಚಿಂತನ ಕ್ರಮಗಳನ್ನು ವಿವರಿಸಿದರು.

ಪಂಚಾಯತ್ ರಾಜ್ ವ್ಯವಸ್ಥೆಯ ಕುರಿತಂತೆ ಮಾತನಾಡಿದ ಸಂಘಟನೆಯ ಸಲಹೆಗಾರರು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ರಾಜಾ ಹುಣಸೂರು ರವರು ಗ್ರಾಮ ಪಂಚಾಯಿತಿ ಸದಸ್ಯರು ಪಂಚಾಯತ್ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸಬೇಕಾಗಿದೆ ಸದಸ್ಯರ ಅಧಿಕಾರವಧಿ ಮುಗಿದ ನಂತರವೂ ಗ್ರಾಮದ ಅಭಿವೃದ್ಧಿಯಲ್ಲಿ ತಾವುಗಳು ಮತದಾರರಾಗಿ ತಮ್ಮ ಹಕ್ಕನ್ನು ಚಲಾಯಿಸುವ ನಿಟ್ಟಿನಲ್ಲಿ ನಿರಂತರ ಅಧ್ಯಯನ ಮಾಡಿ ತಮ್ಮ ವ್ಯಾಪ್ತಿಯ ಯುವಕರನ್ನು ಮಹಿಳೆಯರನ್ನು ಜಾಗೃತಗೊಳಿಸುವ ಕಾರ್ಯನಿರ್ವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಗ್ರಾಮ ಸಭಾ ಸದಸ್ಯರ ವೇದಿಕೆಗಳನ್ನು ರಚಿಸಿ ಜನರ ಸಮಸ್ಯೆಗಳಿಗೆ ಧ್ವನಿ ಆಗುವಂತೆ ಕಿವಿಮಾತು ಹೇಳಿದರು.

ಕಾರ್ಯಗಾರದ ಅಧ್ಯಕ್ಷತೆಯನ್ನು ಒಕ್ಕೂಟದ ಜಿಲ್ಲಾಧ್ಯಕ್ಷರಾದ ಯದುನಾಡು ನಾಗರಾಜು ರವರ ವಹಿಸಿದ್ದರು. ರಾಜ ಹುಣಸೂರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಡತೊರೆ ಮಹೇಶ್ ರವರು ನಿರೂಪಣೆ ಮಾಡಿದರು.

ಹುಣಸೂರು ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಅಗ್ರಹಾರ ರಾಮೇಗೌಡರು ಸೇರಿದಂತೆ ಜಿಲ್ಲಾ ಘಟಕದ 40ಕ್ಕೂ ಹೆಚ್ಚು ಪದಾಧಿಕಾರಿಗಳು ತರಬೇತಿಯಲ್ಲಿ ಪಾಲ್ಗೊಂಡಿದ್ದರು.

RELATED ARTICLES
- Advertisment -
Google search engine

Most Popular