Sunday, April 20, 2025
Google search engine

Homeರಾಜ್ಯಸ್ಕೌಟ್ಸ್, ಗೈಡ್ಸ್ ಸಂಸ್ಥೆ ವತಿಯಿಂದ ಹಸಿರು ದೀಪಾವಳಿ ಆಚರಣೆ: ಪ್ರತಿಜ್ಞೆ ಸ್ವೀಕಾರ

ಸ್ಕೌಟ್ಸ್, ಗೈಡ್ಸ್ ಸಂಸ್ಥೆ ವತಿಯಿಂದ ಹಸಿರು ದೀಪಾವಳಿ ಆಚರಣೆ: ಪ್ರತಿಜ್ಞೆ ಸ್ವೀಕಾರ

ಮಡಿಕೇರಿ : ಭಾರತ್ ಸ್ಕೌಟ್ಸ್, ಗೈಡ್ಸ್‍ನ ಕೊಡಗು ಜಿಲ್ಲಾ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೊಡಗು ಪ್ರಾದೇಶಿಕ ಕಚೇರಿ, ಮಡಿಕೇರಿ ಇವುಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರದ ಪೆÇನ್ನಮ್ಮ ಕುಶಾಲಪ್ಪ ಸ್ಕೌಟ್ಸ್, ಗೈಡ್ಸ್ ಭವನದಲ್ಲಿ ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಅಧ್ಯಕ್ಷತೆಯಲ್ಲಿ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ಕುರಿತು ಪರಿಸರ ಜಾಗೃತಿ ನಡೆಯಿತು.


ದೀಪಾವಳಿ ಹಬ್ಬದ ಶುಭಾಶಯ ಹೇಳಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು, ಪ್ರತಿಯೊಬ್ಬರೂ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಿಸುವ ಮೂಲಕ ಮಾಲಿನ್ಯ ತಡೆಗಟ್ಟಿ ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು ಎಂದರು. ದೀಪಾವಳಿ ಸಂದರ್ಭದಲ್ಲಿ ಎಲ್ಲರೂ ‘ಹಣತೆ ಬೆಳಗಿಸಿ, ದೀಪಾವಳಿ ಆಚರಿಸಿ, ಪಟಾಕಿ ತ್ಯಜಿಸಿ- ಮಾಲಿನ್ಯ ತಡೆಯಿರಿ’ ಎಂಬ ಘೋಷಣೆಯಡಿ ಹಸಿರು ದೀಪಾವಳಿ ಹಬ್ಬ ಆಚರಣೆ ಕುರಿತು ಪ್ರತಿಜ್ಞೆ ಸ್ವೀಕರಿಸಲಾಯಿತು.

ಮಾಲಿನ್ಯಕಾರಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ದ, ವಾಯು ಮತ್ತು ಜಲ ಮಾಲಿನ್ಯ ಹಾಗೂ ನೆಲ ಮಾಲಿನ್ಯದ ಜತೆಗೆ ಪ್ರಾಣಿ-ಪಕ್ಷಿ ಜೀವ ಸಂಕುಲಗಳು ಸೇರಿದಂತೆ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಉಂಟಾಗಿ ಪರಿಸರ ವ್ಯವಸ್ಥೆಗೂ ತೀವ್ರ ಧಕ್ಕೆಯುಂಟಾಗುತ್ತದೆ. ಆದ್ದರಿಂದ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ತ್ಯಜಿಸಿ ಮಾಲಿನ್ಯ ತಡೆಗಟ್ಟುವ ಮೂಲಕ ಪರಿಸರ ಸ್ನೇಹಿ ದೀಪಾವಳಿ ಆಚರಿಸುವ ಕುರಿತು ಜನಜಾಗೃತಿ ಮೂಡಿಸಲಾಯಿತು.

ಸ್ಕೌಟ್ಸ್, ಗೈಡ್ಸ್‍ನ ಸಂಪಾಜೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಕೆ.ಪಿ. ಉಷಾರಾಣಿ ದೀಪಾವಳಿ ಆಚರಣೆ ಕುರಿತ ಪ್ರತಿಜ್ಞಾ ವಿಧಿ ಬೋಧಿಸಿದರು.
ಸ್ಕೌಟ್ಸ್, ಗೈಡ್ಸ್‍ನ ಜಿಲ್ಲಾ ಸಂಸ್ಥೆಯ ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ, ಉಪಾಧ್ಯಕ್ಷ ಡಿಡಿಪಿಐ ಸಿ.ರಂಗಧಾಮಪ್ಪ, ಸ್ಕೌಟ್ಸ್ ಆಯುಕ್ತ ಜಿಮ್ಮಿ ಸಿಕ್ವೇರಾ, ಗೈಡ್ಸ್ ಆಯುಕ್ತೆ ರಾಣಿ ಮಾಚಯ್ಯ, ಸ್ಥಾನೀಕ ಆಯುಕ್ತ ಎಚ್.ಆರ್.ಮುತ್ತಪ್ಪ, ಕಾರ್ಯದರ್ಶಿ ಎಂ.ಎಂ.ವಸಂತಿ, ಸಹ ಕಾರ್ಯದರ್ಶಿ ಗಳಾದ ಬೊಳ್ಳಜಿರ ಅಯ್ಯಪ್ಪ, ಈರಮಂಡ ಹರಿಣಿ ವಿಜಯ್, ಗೈಡ್ಸ್ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ, ಸಂಪಾಜೆ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಧನಂಜಯ, ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ, ಪ್ರಮುಖರಾದ ಕೆ.ಯು.ರಂಜಿತ್, ಅಲೀಮ, ಡೈಸಿ, ಎಂ.ಎಸ್.ಗಣೇಶ್, ಸಿ ಆರ್ ಪಿ ಶೃತಿ, ತರಬೇತಿ ಆಯುಕ್ತರು, ಸ್ಥಳೀಯ ಸಂಸ್ಥೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಇದ್ದರು.

RELATED ARTICLES
- Advertisment -
Google search engine

Most Popular