Thursday, April 3, 2025
Google search engine

Homeರಾಜ್ಯಎಪಿಎಲ್, ಬಿಪಿಎಲ್ ಕಾರ್ಡ್ ದಾರರಿಗೂ ಗೃಹಲಕ್ಷ್ಮಿ ಹಣ ಬಂದೇ ಬರುತ್ತದೆ: ಲಕ್ಷ್ಮೀ ಹೆಬ್ಬಾಳ್ಕರ್

ಎಪಿಎಲ್, ಬಿಪಿಎಲ್ ಕಾರ್ಡ್ ದಾರರಿಗೂ ಗೃಹಲಕ್ಷ್ಮಿ ಹಣ ಬಂದೇ ಬರುತ್ತದೆ: ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಬಿಪಿಎಲ್ ಕಾರ್ಡ್‌ನಿಂದ ಎಪಿಎಲ್ ಕಾರ್ಡ್‌ಗೆ ವರ್ಗಾವಣೆಯಾಗಿದ್ದರೂ ಸಹ ಗೃಹ ಲಕ್ಷ್ಮೀ ಹಣ ಬಂದ್​ ಆಗುವುದಿಲ್ಲ. ಬಿಪಿಎಲ್ ಜೊತೆ ಎಪಿಎಲ್ ಕಾರ್ಡ್‌ದಾರರಿಗೂ ನೀಡಲಾಗುತ್ತೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ೮೦ ಸಾವಿರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುವ ಬದಲಿಗೆ ಎಪಿಎಲ್‌ಗೆ ಪರಿವರ್ತನೆ ಮಾಡಲಾಗಿದೆ ಎಂದರು. ಇದರಿಂದ ಯಾವುದೇ ಗೊಂದಲ ಇಲ್ಲ, ಎಪಿಎಲ್, ಬಿಪಿಎಲ್ ಇದ್ದವರಿಗೆ ಗೃಹಲಕ್ಷ್ಮೀ ಹಣ ಬಂದೇ ಬರುತ್ತೆ . ಬಿಪಿಎಲ್ ಜೊತೆ ಎಪಿಎಲ್ ಕಾರ್ಡ್ದಾರರಿಗೂ ನೀಡಲಾಗುತ್ತೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular