Saturday, April 19, 2025
Google search engine

Homeರಾಜ್ಯ'ಗೃಹಲಕ್ಷ್ಮಿ' ನೋಂದಣಿ: ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

‘ಗೃಹಲಕ್ಷ್ಮಿ’ ನೋಂದಣಿ: ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಬಗ್ಗೆ ಮಹಿಳಾ ಮತ್ತು ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ”ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ಅರ್ಹ ಫಲಾನುಭವಿಗಳು ಅಗತ್ಯವಿರುವ ದಾಖಲೆಗಳೊಂದಿಗೆ ಹತ್ತಿರದಲ್ಲಿರುವ ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಬಹುದು.ಇದಕ್ಕೂ ಮೊದಲು ಅರ್ಹ ಫಲಾನುಭವಿಗಳ ಮೊಬೈಲ್ ಸಂಖ್ಯೆಗೆ ಮೆಸೇಜ್ (ಶೆಡ್ಯೂಲಿಂಗ್) ಬಂದರಷ್ಟೇ ನೋಂದಣಿ ಕೇಂದ್ರಗಳಿಗೆ ತೆರಳಬೇಕಿತ್ತು. ಇದೀಗ ಎಸ್‌ಎಂಎಸ್ ಅವಲಂಭಿಸದೇ ದಾಖಲಾತಿಗಳೊಂದಿಗೆ ನೇರವಾಗಿ ಹತ್ತಿರದಲ್ಲಿರುವ ನೋಂದಣಿ ಕೇಂದ್ರಗಳಿಗೆ ತೆರಳಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು” ಎಂದು ಮಾಹಿತಿ ನೀಡಿದ್ದಾರೆ.
”ಯೋಜನೆಗೆ ಚಾಲನೆ ಸಿಕ್ಕ ೭ ದಿನಗಳಲ್ಲೇ ೫೦ ಲಕ್ಷಕ್ಕೂ ಅಧಿಕ ಫಲಾನುಭವಿಗಳು ತಮ್ಮ ಹೆಸರು ನೋಂದಾಯಿಸಿಕೊಂಡಿರುವುದು ಖುಷಿ ತಂದಿದೆ, ಇದಲ್ಲದೇ ಗೃಹಲಕ್ಷ್ಮಿ ನೋಂದಣಿಗೆ ಹಣ ಪಡೆದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು. ಸೇವಾ ಕೇಂದ್ರಗಳಲ್ಲಿ ಅಸಡ್ಡೆ ತೋರಿದರೆ ಅಂತಹವರ ವಿರುದ್ಧವೂ ಸಹ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular