Friday, April 18, 2025
Google search engine

Homeರಾಜ್ಯಗೃಹಲಕ್ಷ್ಮಿ ಹಣ ಕೂಡಿಟ್ಟು ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಮಹಿಳೆ

ಗೃಹಲಕ್ಷ್ಮಿ ಹಣ ಕೂಡಿಟ್ಟು ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಮಹಿಳೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ನೀಡುವ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಹಣ ಬಡ ಮಹಿಳೆಯರ ಪಾಲಿಗೆ ವರದಾನವಾಗಿದೆ.

ಕಳೆದ ೧೦ ತಿಂಗಳಿಂದ ಬಂದ ಹಣವನ್ನು ಒಟ್ಟುಗೂಡಿಸಿ ವೃದ್ಧ ಮಹಿಳೆಯೊಬ್ಬರು ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಸುರೇಬಾನದ ಮನಿಹಾಳ ಗ್ರಾಮದ ಸಕ್ಕುಬಾಯಿ ಈರಣ್ಣ ಕರದಿನ ಎಂಬುವರು ಗೃಹಲಕ್ಷ್ಮಿ ಹಣದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಮಹಿಳೆ.

ಸಕ್ಕುಬಾಯಿ ಈರಣ್ಣ ಕರದಿನ, ಹಲವು ತಿಂಗಳಿಂದ ಕಣ್ಣಿನ ಸಮಸ್ಯೆ ಎದುರಿಸುತ್ತಿದ್ದರು. ಬಲಗಣ್ಣಿನಲ್ಲಿ ಪೊರೆ ಬಂದಿದ್ದ ಕಾರಣ ಶಸ್ತ್ರಚಿಕಿತ್ಸೆ ಅನಿವಾರ್ಯ ಆಗಿತ್ತು. ಹಣಕಾಸಿನ ಸಮಸ್ಯೆಯಿಂದ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೆ ಸುಮ್ಮನಿದ್ದ ಸಕ್ಕುಬಾಯಿ, ಕಳೆದ ೧೦ ತಿಂಗಳಿಂದ ರಾಜ್ಯ ಸರ್ಕಾರದಿಂದ ಬರುತ್ತಿರುವ ಗೃಹಲಕ್ಷ್ಮಿ ಯೋಜನೆಯ ಮೊತ್ತವನ್ನು ಕೂಡಿಟ್ಡು, ಕಳೆದ ವಾರ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ರಾಮದುರ್ಗದ ಡಾ.ವಿಜಯ್ ಸುಲ್ತಾನ್ ಪುರ ಮಹಿಳೆಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಗೃಹಲಕ್ಷ್ಮಿ ಯೋಜನೆಯ ರೂವಾರಿಗಳಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಧನ್ಯವಾದ ಹೇಳಬೇಕು. ಅವರು ನೀಡುವ ಎರಡು ಸಾವಿರ ರೂಪಾಯಿಯಿಂದ ನನ್ನ ಕಣ್ಣಿನ ಸಮಸ್ಯೆಗೆ ಪರಿಹಾರ ಸಿಕ್ಕಿತು ಎಂದು ಸಕ್ಕುಬಾಯಿ ಕರದಿನ ಹೇಳಿದರು.

RELATED ARTICLES
- Advertisment -
Google search engine

Most Popular