ಮೈಸೂರು: ಆಗಸ್ಟ್ ಅಂತ್ಯದಲ್ಲೇ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡುತ್ತೇವೆ. ದಿನಾಂಕ ಮುಂದೂಡಿಕೆ ಆಗಿಲ್ಲ. ರಾಹುಲ್ ಗಾಂಧಿ ಅವರ ಸಮಯ ಕೇಳಿದ್ದೇವೆ. ಇನ್ನೂ ಟೈಮ್ ಕೊಟಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹ ಲಕ್ಷ್ಮಿ ಯೋಜನೆಗೆ 1.33 ಕೋಟಿ ಜನ ನೋಂದಣಿ ಆಗಬೇಕು. ಇದುವರೆಗೆ 1.6 ಲಕ್ಷ ಮಹಿಳೆಯರು ನೋಂದಣಿ ಮಾಡಿಸಿದ್ದಾರೆ. ಇನ್ನೂ ನೋಂದಣಿ ಬಾಕಿ ಇದೆ. ನೋಂದಣಿ ಪ್ರಕ್ರಿಯೆ ಮುಗಿಯಬೇಕು ಎಂದು ಹೇಳಿದರು.
ಬಿಬಿಎಂಪಿಯಲ್ಲಿ ಬೆಂಕಿ ಬಿದ್ದ ಪ್ರಕರಣ ಕುರಿತು ಮಾತನಾಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದೇನೆ. 40% ಗಿಂತ ಕಡಿಮೆ ಕಡಿಮೆ ಗಾಯವಾಗಿರೋರಿಗೆ ತೊಂದರೆ ಇಲ್ಲ. ಒಬ್ಬರಿಗೆ 40% ಗಿಂತ ಹೆಚ್ಚು ಗಾಯವಾಗಿದೆ. ಎಲ್ಲಾ ಗಾಯಾಳುಗಳಿಗೂ ಅತ್ಯುತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ತಮಿಳುನಾಡು ಕಾವೇರಿ ನೀರು ಬಿಡುವಂತೆ ಮತ್ತೆ ಖ್ಯಾತೆ ಆರಂಭಿಸಿದೆ. ಈ ಭಾರಿ ನೀರಿಕ್ಷಿತ ಮಟ್ಟದ ಮಳೆಯಾಗಿಲ್ಲ. ಹೀಗಿಗಾ ಸಂಕಷ್ಟದ ಸೂತ್ರವನ್ನು ಎರೆಡು ರಾಜ್ಯಗಳು ಪಾಲಿಸಬೇಕಿದೆ. ಆದರೂ ತಮಿಳುನಾಡು ನೀರು ಬಿಡುವಂತೆ ಖ್ಯಾತೆ ಶುರುಮಾಡಿದೆ. ಈ ಬಗ್ಗೆ ನಮ್ಮ ತಜ್ಞರ ಜೊತೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ ವಿಚಾರಕ್ಕೆ ಒಂದು ಸಮಿತಿ ಮಾಡಿದ್ದೇವೆ. ಶಾಸಕರಿಗೂ ಇದರಲ್ಲಿ ಸ್ಥಾನ ಕೊಡಬೇಕಿದೆ. ಯಾವ ಅನುಪಾತದಲ್ಲಿ ಇದನ್ನ ಹಂಚಿಕೆ ಮಾಡಬೇಕು ಎಂಬ ಬಗ್ಗೆ ಸಮಿತಿ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.
ಏಕರೂಪ ನಾಗರಿಕ ಕಾಯ್ದೆಗೆ ನಮ್ಮ ವಿರೋಧವಿದೆ:
ಕೇಂದ್ರ ಸರ್ಕಾರದ ಏಕರೂಪ ನಾಗರಿಕ ಕಾಯ್ದೆಗೆ ನಮ್ಮ ವಿರೋಧವಿದೆ. ಕೇರಳದಲ್ಲೂ ಈಗಾಗಲೇ ಇದಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ. ನಾವೂ ಇದಕ್ಕೆ ವಿರೋಧ ಮಾಡಿದ್ದೇವೆ ಎಂದರು.
ಚುನಾವಣೆ ವಿಚಾರದಲ್ಲಿ ಯಾವುತ್ತು ಹಿಂದೆ ಬಿದ್ದಿಲ್ಲ:
ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ವಾರ್ಡ್ ಗಳ ಪುನರ್ವಿಂಗಡಣೆ ವಿಚಾರದಲ್ಲಿ ನ್ಯಾಯಾಲಯ ಕೆಲವೊಂದು ಗಡುವು ನೀಡಿದೆ. ಆ ಗಡುವಿನ ಆಧಾರದಲ್ಲಿ ವರದಿಗಳು ಸಿದ್ಧವಾಗುತ್ತಿವೆ. ಅದನ್ನು ಕೋರ್ಟಿಗೆ ನಾವು ನೀಡುತ್ತೇವೆ. ಚುನಾವಣೆ ವಿಚಾರದಲ್ಲಿ ನಾವು ಯಾವುತ್ತು ಹಿಂದೆ ಬಿದ್ದಿಲ್ಲ. ಬಿಜೆಪಿಯವ್ರು ಚುನಾವಣೆಗಳನ್ನ ಮುಂದುಡೂತ್ತಿದ್ರು. ನಾವೂ ಆ ರೀತಿ ಮಾಡುವುದಿಲ್ಲ. ನ್ಯಾಯಾಲಯದ ನಿರ್ದೇಶನದಂತೆ ನಡೆಯುತ್ತೇವೆ ಎಂದು ತಿಳಿಸಿದರು.

ತಪ್ಪು ಮಾಡದವರಿಗೆ ಬಿಲ್ ನಲ್ಲಿ ಸಮಸ್ಯೆಯಾಗುವುದಿಲ್ಲ
ಗುತ್ತಿಗೆದಾರರ ಬಿಲ್ ಬಾಕಿ ವಿಚಾರವಾಗಿ ಪ್ರತಿಕ್ರಿಯಿಸಿ, 40% ಕಮಿಷನ್ ಬಗ್ಗೆ ತನಿಖೆಯಾಗದೆ ಬಿಲ್ ಹೇಗೆ ಬಿಡುಗಡೆ ಮಾಡಲು ಸಾಧ್ಯವಿದ್ದು, ತನಿಖೆ ಪ್ರಗತಿಯಲ್ಲಿದೆ. ತಪ್ಪು ಮಾಡದೆ ಇರುವವರಿಗೆ ಬಿಲ್ ನಲ್ಲಿ ಯಾವುದೇ ಸಮಸ್ಯೆಯಾಗುವುದಿಲ್ಲ. ತಪ್ಪು ಮಾಡಿರುವವರಿಗೆ ಭಯ ಇರುತ್ತೆ. ಬಿಜೆಪಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಬಿಜೆಪಿಗೆ ಏನು ವಿಚಾರ ಇಲ್ಲದೆ ಈ ಬಗ್ಗೆ ಹೋರಾಟ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. 40% ಕಮಿಷನ್ ಗಾಗಿಯೇ ಜನ ಅವರನ್ನ ತಿರಸ್ಕರಿಸಿದ್ದಾರೆ. ನಾವು ಅವತ್ತು ಮಾಡಿರುವ ಆರೋಪವನ್ನನ್ನು ಸಾಬೀತು ಮಾಡಬೇಕಿದೆ. ಈ ಕಾರಣ ನಾಲ್ಕು ಟೀಂ ತನಿಖೆ ಮಾಡುತ್ತಿದೆ. ನಡೆದಿರುವ ಕಾಮಾಗಾರಿಗಳೆಲ್ಲಾ ಮೂರು ವರ್ಷದ ಹಿಂದೆ ಮುಕ್ತಾಯವಾಗಿದೆ. ಈಗ ಬಿಲ್ ಗಾಗಿ ಆತುರ ಪಟ್ಟರೆ ಹೇಗೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಜನವರಿಯಿಂದ ಯುವ ನಿಧಿ ಜಾರಿ
ಯುವ ನಿಧಿ ಡಿಸೆಂಬರ್ ನಂತರ ಜಾರಿಯಾಗಲಿದೆ. ಪದವಿ ಮುಗಿಸಿ ಆರು ತಿಂಗಳು ಕೆಲಸ ಸಿಗದೇ ಇರುವವರಿಗೆ ನಿರುದ್ಯೋಗ ಭತ್ಯೆ ನೀಡುತ್ತೇವೆ ಅಂತ ಹೇಳಿದ್ದೇವೆ. ಡಿಸೆಂಬರ್ ಗೆ ಆರು ತಿಂಗಳು ಆಗುತ್ತೆ. ಆದ್ದರಿಂದ ಬಹುಶಃ ಜನವರಿಯಿಂದ ಯುವ ನಿಧಿ ಜಾರಿ ಆಗುತ್ತೆ. ಬಿಎ, ಬಿಎಸ್ಸಿ, ಬಿಕಾಂ, ಎಂಕಾಂ, ಎಂಎಸ್ಸಿ ಮುಂತಾದ ಪದವಿ ಮಾಡಿದವರಿಗೆ 3000 ರೂ. ಕೊಡುತ್ತೇವೆ. ಡಿಪ್ಲೋಮಾ ಮಾಡಿದವರಿಗೆ 1500 ರೂ. ಕೊಡುತ್ತೇವೆ ಎಂದು ಮಾಹಿತಿ ನೀಡಿದರು.
ಸಿಜೆ ಹೊರಗಿಟ್ಟು ಚುನಾವಣಾ ಆಯುಕ್ತರ ನೇಮಕ: ಇದೊಂದು ಷಡ್ಯಂತ್ರ
ಸಿಜೆ ಹೊರಗಿಟ್ಟು ಚುನಾವಣಾ ಆಯುಕ್ತರ ನೇಮಕ ವಿಚಾರ, ಇದೊಂದು ಷಡ್ಯಂತ್ರ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರನ್ನು ಹೊರಗಿಟ್ಟು ತಮಗೆ ಬೇಕಾದವರನ್ನು ಆಯುಕ್ತರನ್ನಾಗಿ ಮಾಡಿಕೊಳ್ಳಲು ಹೊರಟಿದ್ದಾರೆ. ಐಪಿಸಿ ಸೇರಿದಂತೆ ಕಾನೂನುಗಳ ತಿದ್ದುಪಡಿ ಮಾಡಲು ಹೊರಟಿದ್ದಾರೆ. ಐಪಿಸಿ 1861ರಲ್ಲಿ ರಚನೆಯಾದ ಕಾನೂನು, ಏನು ಮಾಡುತ್ತಾರೋ ನೋಡೋಣ ಎಂದರು.