Friday, April 4, 2025
Google search engine

Homeರಾಜ್ಯಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ: ಅರ್ಜಿಯಲ್ಲೇನಿದೆ ಗೊತ್ತಾ?

ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ: ಅರ್ಜಿಯಲ್ಲೇನಿದೆ ಗೊತ್ತಾ?

ಬೆಂಗಳೂರು: ಚುನಾವಣೆಗೂ ಮುನ್ನ ಘೋಷಿಸಿದ್ದ ಗೃಹಲಕ್ಷ್ಮೀ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ.

ಈ ಯೋಜನೆಯಡಿ ಮನೆಯ ಯಜಮಾನಿಗೆ 2000ರೂಪಾಯಿ ಸಹಾಯಧನ ನೀಡಲಾಗುತ್ತಿದ್ದು, ಲಾಭ ಪಡೆದುಕೊಳ್ಳಲು ಸರ್ಕಾರವು ಹಲವು ಷರತ್ತುಗಳನ್ನು ವಿಧಿಸಿದೆ. ಮಾತ್ರವಲ್ಲದೇ ಇದೀಗ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗೃಹಲಕ್ಷ್ಮಿ ಯೋಜನೆ ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದ್ದು, ‘ಗೃಹಲಕ್ಷ್ಮೀ’ ಅರ್ಜಿ ನಮೂನೆಯಲ್ಲಿ ಮೂವರ ಭಾವಚಿತ್ರವಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾವಚಿತ್ರ ಅರ್ಜಿ ನಮೂನೆಯಲ್ಲಿದೆ.

ಇನ್ನು ಅರ್ಜಿಯಲ್ಲಿ ಮನೆಯ ಯಜಮಾನಿ ಪತಿಯ ದಾಖಲೆಗಳನ್ನು ಕೇಳಲಾಗಿದೆ. ಪತಿಯ ಆಧಾರ್ ಕಾರ್ಡ್ ವೋಟರ್ ಐಡಿ ದಾಖಲೆ ಕೂಡ ಅರ್ಜಿ ಸಲ್ಲಿಕೆ ವೇಳೆ ಅಗತ್ಯವಾಗಿದೆ.

ಗೃಹಲಕ್ಷ್ಮೀ ಅರ್ಜಿ ಸಲ್ಲಿಸುವುದೇಗೆ?

ಈ ಯೋಜನೆಯ ಫಲಾನುಭವಿಗಳು ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬೇಕು. ಆ ನಂತರ ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡುವುದು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್‌ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್‌ ಮೂಲಕವಾಗಲಿ ಅಥವಾ ಭೌತಿಕವಾಗಿಯಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಪ್ರಮುಖ ಷರತ್ತುಗಳೇನು?

1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.

2. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ.

3. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್‌ ಖಾತೆ ಮತ್ತು ಆಧಾರ ಕಾರ್ಡ್‌ ಗಳನ್ನು ಜೋಡಣೆ ಮಾಡಬೇಕು.

4. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿದ್ದಲ್ಲಿ ಸೌಲಭ್ಯ ಸಿಗುವುದಿಲ್ಲ.

5. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿಯು ಜಿಎಸ್‌ ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.

RELATED ARTICLES
- Advertisment -
Google search engine

Most Popular