ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷಿತ ಸ್ಥಾನಗಳು ಬಂದಿಲ್ಲವಾದ್ದರಿಂದ ಈಗಾಗಲೇ ಕಾಂಗ್ರೆಸ್ಸಿನ ಹಲವು ಶಾಸಕರು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಕುರಿತಂತೆ ಹೇಳಿಕೆಗಳನ್ನು ನೀಡಿದ್ದು, ಇದೀಗ ಮಾರಿ ಶಾಸಕ ಎಚ್‌ಎಮ್ ರೇವಣ್ಣ ಅವರು ಯೋಜನೆಗಳಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೆ ಸರಿಪಡಿಸುತ್ತೇವೆ ಆದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಯೋಜನೆಗಳಲ್ಲಿ ಮಾರ್ಪಾಡು ಅಥವಾ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೆ ಅದನ್ನು ಸರಿಪಡಿಸುತ್ತೇವೆ ಅದು ಬಿಟ್ಟು ಯಾವುದೇ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.