ಶಿವಮೊಗ್ಗ: ಮನೆ ಒಡತಿಗೆ ೨೦೦೦ ರೂ.ಗಳ ಸಹಾಯಧನ ನೀಡುವ ಗೃಹಲಕ್ಷ್ಮಿ, ರಾಜ್ಯದ ಪ್ರತಿ ಮನೆ ಮನೆಗೆ ಉಚಿತ ವಿದ್ಯುತ್ ಒದಗಿಸುವ ಗೃಹಜ್ಯೋತಿ, ಮುಂತಾದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಇಂದು ಶಿಕಾರಿಪುರದ ತಾಲೂಕು ಆಡಳಿತ ಸಭಾಂಗಣದ ಹಿಂಭಾಗದಲ್ಲಿ ಏರ್ಪಡಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದ ಅವರು, ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಕಾಂಗ್ರೆಸ್ ಸರಕಾರ ನುಡಿದಂತೆ ನಡೆದು ಮುಂದೆ ಸಾಗುತ್ತಿದೆ ಎಂದರು.
ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಸರಕಾರಿ ಶಾಲೆಗಳನ್ನು ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ದಿ ಪಡಿಸುವ ಉದ್ದೇಶ ಹೊಂದಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಆರ್.ಪ್ರಸನ್ನಕುಮಾರ್, ಕಲಗೋಡು ರತ್ನಾಕರ್, ನಾಗರಾಜ್ ಗೌಡ ,ಗೋಣಿ ಮಾಲತೇಶ್, ವೈ.ಹೆಚ್ ನಾಗರಾಜ್, ಜಿ.ಪಂ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಸೇರಿದಂತೆ ಹಲವರಿದ್ದರು.