ಶಿವಮೊಗ್ಗ : ಗ್ಯಾರಂಟಿ ಯೋಜನೆಗಳಿಂದ ಜನರು ದಾರಿ ತಪ್ಪುತ್ತಿದ್ದಾರೆ ಎಂದು ಕೆಲವರು ತಪ್ಪು ಸಂದೇಶ ಹರಡುತ್ತಿದ್ದಾರೆ. ಈ ರೀತಿಯ ವದಾಂತಿಗಳಿಗೆ ಜನರು ಕಿವಿಕೊಡಕೂಡದು. ಗ್ಯಾರಂಟಿ ಯೋಜನೆಗಳಿಂದ ಬಡವರ ಬಾಳು ಹಸನಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಸಾಗರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಇಲ್ಲಿನ ಪಡವಗೋಡು ಗ್ರಾಮ ಪಂಚಾಯಿತಿ ಲಿಂಗದಹಳ್ಳಿ ಹಾಗೂ ಭೀಮನೇರಿಯ ಸೂರನಗದ್ದೆ ದೇವಸ್ಥಾನ ವೃತ್ತದಲ್ಲಿ ಬುಧವಾರ (ಏ.೩) ಆಯೋಜಿದ್ದ ಗ್ರಾಮ ಪಂಚಾಯಿತಿ ಮಟ್ಟದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಗ್ರಾಮೀಣ ಕೃಪಾಂಕ ಕಲ್ಪಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಅಶಕ್ತ ಕುಟುಂಬಗಳಿಗೆ ಆಶಾಕಿರಣ ಆಗಿದ್ದರು. ಅವರ ಮಗಳಾದ ನಾನು ಕೂಡ ಬಂಗಾರಪ್ಪ ಅವರ ಹಾದಿಯಲ್ಲಿ ಸಾಗುತ್ತೇನೆ. ನೊಂದವರ ಕಣ್ಣೀರು ಒರೆಸುತ್ತೇನೆ ಎಂದರು.
ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ೫ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ ಎಂದರು.
ನಟ ಶಿವರಾಜಕುಮಾರ್ ಮಾತನಾಡಿ, ಆರೋಗ್ಯ ಸಮಸ್ಯೆ ನಡುವೆಯೂ ಕಾರ್ಯಕ್ರಮಕ್ಕೆ ಆಗಮಿಸಿದ್ದೇನೆ. ಇದಕ್ಕೆ ಕಾರಣ ಶಿವಮೊಗ್ಗ ಜನರು ಗೀತಾ ಅವರ (ಪತ್ನಿ) ಮೇಲಿಟ್ಟಿರುವ ನಂಬಿಕೆ. ಆದ್ದರಿಂದ, ನಾನು ಗೀತಾ ಅವರನ್ನು ನಂಬಿದ್ದೇನೆ. ಮತ ನೀಡಿ ಎಂದು ಮನೆ ಬಾಗಿಲಿಗೆ ಬಂದಿದ್ದೇವೆ. ಮತ ನೀಡಿ ಆಶೀರ್ವದಿಸಿ ಎಂದು ಕೋರಿದರು.