Sunday, April 20, 2025
Google search engine

Homeರಾಜ್ಯಸುದ್ದಿಜಾಲಗ್ಯಾರಂಟಿ ಯೋಜನೆಗಳು - ಕರ್ನಾಟಕ ಜನತೆಯ ಸಂಜೀವಿನಿ: ಸಚಿವ ಬಿ.ನಾಗೇಂದ್ರ

ಗ್ಯಾರಂಟಿ ಯೋಜನೆಗಳು – ಕರ್ನಾಟಕ ಜನತೆಯ ಸಂಜೀವಿನಿ: ಸಚಿವ ಬಿ.ನಾಗೇಂದ್ರ

ಬಳ್ಳಾರಿ: ರಾಜ್ಯದ ಜನತೆಯ ಅಭೂತಪೂರ್ವ ಆಶೀರ್ವಾದದಿಂದ ಆಡಳಿತಕ್ಕೆ ಬಂದ ನಮ್ಮ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ರಾಜ್ಯದ ಜನತೆಯ ಸಂಜೀವಿನಿಯಾಗಿವೆ ಎಂದು ಯುವ ಸಬಲೀಕರಣ, ಕ್ರೀಡಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ನಗರದ ಮೋಕಾ ರಸ್ತೆಯ ಸುವರ್ಣ ಇಂಟರ್ ನ್ಯಾಷನಲ್ ಸ್ಕೂಲ್ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, ಐದಕ್ಕೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ನಮ್ಮ ಸರ್ಕಾರವು ನುಡಿದಂತೆ ನಡೆದಿದೆ.

ಈಗ ದೇಶವೇ ನಮ್ಮ ರಾಜ್ಯದತ್ತ ನೋಡುತ್ತಿದ್ದು, ಇತರೆ ರಾಜ್ಯಗಳಿಗೆ ನಮ್ಮ ಸರ್ಕಾರವು ಮಾದರಿಯಾಗಿದೆ. ನಮ್ಮ ಸರ್ಕಾರದಂತೆಯೇ ಅಲ್ಲಿಯೂ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದ್ದಾರೆ ಎಂದು ತಿಳಿಸಿದರು.ಮಹಿಳೆಯರನ್ನು ಸಶಕ್ತರನ್ನಾಗಿ ಮಾಡಲು ಈ ಯೋಜನೆಗಳನ್ನು ರೂಪಿಸಿದ್ದು, ತಾಯಂದಿರು, ಅಕ್ಕ ತಂಗಿಯರು ಗ್ಯಾರಂಟಿ ಯೋಜನೆಗಳಿಂದ ಬಹಳ ಸಂತುಷ್ಟರಾಗಿದ್ದು, ?ಕೆರೆಯ ನೀರನ್ನು ಕೆರೆಗೆ ಚೆಲ್ಲಿ’ ಎನ್ನುವಂತೆ ರಾಜ್ಯದ ಜನತೆಯ ತೆರಿಗೆ ಹಣವನ್ನು ರಾಜ್ಯದ ಜನತೆಯ ಅಭಿವೃದ್ಧಿಗೆ ವಿನಿಯೋಗಿಸಲಾಗುತ್ತಿದೆಯೇ ಹೊರತು, ರಾಜ್ಯ ಸರ್ಕಾರದ ಯಾವುದೇ ಸ್ವಹಿತಾಸಕ್ತಿ ಇಲ್ಲ ಎಂದು ಮನದಟ್ಟು ಮಾಡಿದರು.ಜನಪರ ಕಾಳಜಿಯಿರುವ ಯೋಜನೆಗಳನ್ನೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಜಾರಿಗೊಳಿಸಿದ್ದಾರೆ.

ಈ ನಿಟ್ಟಿನಲ್ಲಿ ನಮ್ಮ ಸರ್ಕಾರವು ೫ ವರ್ಷಗಳ ಕಾಲ ಸುಭದ್ರವಾಗಿರುತ್ತದೆ. ನಮ್ಮ ಸರ್ಕಾರವು ಇರುವವರೆಗೂ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲಾಗುವುದಿಲ್ಲ ಎಂದು ಸಚಿವ ಬಿ.ನಾಗೇಂದ್ರ ಅವರು ಹೇಳಿದರು.ಜಿಲ್ಲೆಯಲ್ಲಿ ಮಾಹಿತಿ ಕೊರತೆಯಿಂದ ಗ್ಯಾರಂಟಿ ಯೋಜನೆಗಳಿಂದ ವಂಚಿತರಾದ ಪ್ರತಿ ಫಲಾನುಭವಿಗಳ ಮನೆಗೆ ಭೇಟಿ ನಡೆಸಬೇಕು. ತಿಂಗಳೊಳಗಾಗಿ ಅವರ ಸಮಸ್ಯೆಗಳನ್ನು ಕಂಡುಕೊಂಡು ಪರಿಹಾರ ಒದಗಿಸಬೇಕು ಎಂದು ಸಚಿವ ಬಿ.ನಾಗೇಂದ್ರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಗ್ಯಾರಂಟಿ ಯೋಜನೆಗಳಿಗಾಗಿ ಬಳ್ಳಾರಿ ಜಿಲ್ಲೆಯಲ್ಲಿ ವೆಚ್ಚ ಮಾಡಿದ ಒಟ್ಟು ಮೊತ್ತ: ಬಳ್ಳಾರಿ ಜಿಲ್ಲೆಯಲ್ಲಿ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಒಟ್ಟು ೫೬೬.೫೩ ಕೋಟಿ ರೂ. ವೆಚ್ಚ ಮಾಡಲಾಗಿದೆ. ಶಕ್ತಿ ಯೋಜನೆಗೆ ೬೫.೬೨ ಕೋಟಿ ರೂ., ಗೃಹಲಕ್ಷ್ಮಿ ಯೋಜನೆಗೆ ೩೦೧.೮೪ ಕೋಟಿ ರೂ., ಅನ್ನಭಾಗ್ಯ ಯೋಜನೆಗೆ ೧೧೧.೯೨ ಕೋಟಿ ರೂ., ಗೃಹಜ್ಯೋತಿ ಯೋಜನೆಗೆ ೮೭ ಕೋಟಿ ರೂ., ಯುವನಿಧಿ ಯೋಜನೆಗೆ ೦.೧೫ ಕೋಟಿ ರೂ. ಸೇರಿ ಒಟ್ಟು ೫೬೬.೫೩ ಕೋಟಿ ರೂ. ಮೊತ್ತ ವೆಚ್ಚ ಮಾಡಲಾಗಿದೆ ಎಂದು ಸಚಿವ ಬಿ.ನಾಗೇಂದ್ರ ಅವರು ತಿಳಿಸಿದರು.

ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರು ಮಾತನಾಡಿ, ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ತಮ್ಮ ಮಕ್ಕಳ ವಿದ್ಯಾಭ್ಯಾಸ ಹಾಗೂ ಇನ್ನಿತರೆ ಖರ್ಚು-ವೆಚ್ಚಗಳನ್ನು ನಿಭಾಯಿಸಲು ಗ್ಯಾರಂಟಿ ಯೋಜನೆಗಳು ಉಪಯುಕ್ತವಾಗಿವೆ. ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯವು ಇನ್ನಷ್ಟು ಅಭಿವೃದ್ಧಿಯತ್ತ ಸಾಗಲಿದೆ ಎಂದು ಹೇಳಿದರು.ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಿ, ಅಭಿವೃದ್ಧಿ ಪರ ಯೋಜನೆಗಳನ್ನೂ ಜಾರಿಗೆ ತಂದಿದ್ದಾರೆ ಎಂದು ಹೇಳಿದರು.ಕಳೆದ ಬಜೆಟ್‌ನಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಗೆ ೨೦೦ ಕೋಟಿ ರೂ. ಅನುದಾನ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular