ಬೆಂಗಳೂರು: ಯಾವುದೇ ಕಾರಣಕ್ಕೂ ಬಡವರ ಕಲ್ಯಾಣಕ್ಕೆ ಅನುಷ್ಠಾನಗೊಳಿಸಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತೇವೆಯೇ ಹೊರತು ನಿಲ್ಲಿಸುವ ಪ್ರಶ್ನೆಯಿಲ್ಲ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತ ನೀಡದಿದ್ದರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು. ನಿಮಗೆ ಅಕ್ಷತೆ ಬೇಕಾ ಅಥವಾ ಗ್ಯಾರಂಟಿಗಳು ಬೇಕಾ ಎಂಬ ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಸಿಎಂ ಸ್ಪಷ್ಟನೆ ನೀಡಿದ್ದಾರೆ.
ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಅವುಗಳನ್ನು ಖಂಡಿತಾ ಮುಂದುವರಿಸಲಾಗುವುದು ಎಂದರು.