Friday, April 11, 2025
Google search engine

Homeರಾಜ್ಯಚುನಾವಣೆ ಮುಗಿದ ಮೇಲೆ ಗ್ಯಾರಂಟಿಗಳನ್ನು ನಿಲ್ಸಲ್ಲ, ನಿಲ್ಸಲ್ಲ, ನಿಲ್ಸಲ್ಲ: ಸಿಎಂ ಸಿದ್ಧರಾಮಯ್ಯ ಘೋಷಣೆ

ಚುನಾವಣೆ ಮುಗಿದ ಮೇಲೆ ಗ್ಯಾರಂಟಿಗಳನ್ನು ನಿಲ್ಸಲ್ಲ, ನಿಲ್ಸಲ್ಲ, ನಿಲ್ಸಲ್ಲ: ಸಿಎಂ ಸಿದ್ಧರಾಮಯ್ಯ ಘೋಷಣೆ

ಚನ್ನಪಟ್ಟಣ: ಚುನಾವಣೆ ಮುಗಿದ ಮೇಲೆ ಗೃಹಲಕ್ಷ್ಮಿ ಸೇರಿ ಗ್ಯಾರಂಟಿಗಳನ್ನು ಸರ್ಕಾರ ಬಂದ್ ಮಾಡ್ತದೆ ಎಂದು ದೇವೇಗೌಡರು ಪರಮ ಸುಳ್ಳು ಹೇಳಿದ್ದಾರೆ. ದೇವೇಗೌಡರೇ ಒಂದು ಮಾತು ಹೇಳ್ತೀನಿ, ಸಿದ್ದರಾಮಯ್ಯ ಒಮ್ಮೆ ಮಾತು ಕೊಟ್ಟರೆ ಯಾವುದೇ ಕಾರಣಕ್ಕೂ ಮಾತು ತಪ್ಪಲ್ಲ. ನಮ್ಮ ಸರ್ಕಾರ ಯಾವ ಗ್ಯಾರಂಟಿಗಳನ್ನೂ ನಿಲ್ಸಲ್ಲ, ನಿಲ್ಸಲ್ಲ, ನಿಲ್ಸಲ್ಲ ಎಂದು ಸಿಎಂ ಸಿದ್ಧರಾಮಯ್ಯ ಘೋಷಿಸಿದರು.

ವಕ್ಫ್ ವಿಚಾರದಲ್ಲೂ ಬಿಜೆಪಿ ಜೊತೆ ಸೇರಿ ಸುಳ್ಳು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಒಬ್ಬೇ ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಅಧಿಕೃತ ಘೋಷಣೆ ಮಾಡಿದ್ದೇವೆ ಎಂದು ಪುನರುಚ್ಚರಿಸಿದರು.

ಭಾರತ ಮೋದಿಯವರಂತಹಾ ಸುಳ್ಳ ಪ್ರಧಾನಿಯನ್ನು ನಾನು ಹಿಂದೆಂದೂ ನೋಡಿಲ್ಲ. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುವುದಾಗಿ ದೇವೇಗೌಡರು ಹೇಳಿದ್ದರು. ಈಗ ಮೋದಿಯವರನ್ನು ಯದ್ವಾತದ್ವಾ ಹೊಗಳುತ್ತಿದ್ದಾರೆ ಎಂದು ಛೇಡಿಸಿದರು. ನಾನು, ಜಾಲಪ್ಪ ಅವರು ಇಲ್ಲದೇ ಹೋಗಿದ್ದರೆ ೧೯೯೪ ರಲ್ಲಿ ದೇವೇಗೌಡರು ಮುಖ್ಯಮಂತ್ರಿ ಆಗಲು ಸಾಧ್ಯವೇ ಇರಲಿಲ್ಲ. ದೇವೇಗೌಡರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ರಾಷ್ಟ್ರೀಯ ಅಧ್ಯಕ್ಷರಾದ ಎಸ್.ಆರ್.ಬೊಮ್ಮಾಯಿ ಸಿದ್ದರಿರಲಿಲ್ಲ. ಏಕೆಂದರೆ ಇವರು ಬೊಮ್ಮಾಯಿ ಸರ್ಕಾರವನ್ನು ಕೆಡವಿದ್ದರು. ಆದರೂ ಆ ಸಂದರ್ಭದಲ್ಲಿ ನಾವೆಲ್ಲಾ ಒಟ್ಟಾಗಿ ದೇವೇಗೌಡರ ಪರವಾಗಿ ನಿಂತೆವು. ಈಗ ಸಿದ್ದರಾಮಯ್ಯ ಅವರಿಗೆ ಸೊಕ್ಕು, ಅಹಂ ಎನ್ನುತ್ತಿದ್ದಾರೆ. ಇದು ಪಾಳೇಗಾರಿಕೆ ಅಲ್ವಾ ದೇವೇಗೌಡರೇ ಎಂದು ಪ್ರಶ್ನಿಸಿದರು.

ಆಕಸ್ಮಿಕವಾಗಿ ಪ್ರಧಾನಿ ಆದ ದೇವೇಗೌಡರು ಪಾಳೆಗಾರಿಕೆ ಮಾತ್ರ ಬಿಡಲ್ಲ. ದಲಿತರು, ಹಿಂದುಳಿದವರನ್ನು ಕಂಡ್ರೆ ಆಗಲ್ಲ. ಒಕ್ಕಲಿಗರನ್ನು ಬೆಳೆಯಲು ಬಿಡಲ್ಲ. ಇದೆಲ್ಲಾ ಪಾಳೇಗಾರಿಕೆ ಅಲ್ವಾ ಮೊಮ್ಮಗನಿಗಾಗಿ ಒಂದು ವಾರದಿಂದ ಚನ್ನಪಟ್ಟಣದಲ್ಲೇ ಇದ್ದಾರೆ. ಜೆಡಿಎಸ್ ಅಥವಾ ಬಿಜೆಪಿ ಯಿಂದ ಬೇರೆ ಯಾರಾದರೂ ನಿಂತಿದ್ದರೆ ದೇವೇಗೌಡರು ಹೀಗೆ ವಾರಗಟ್ಟಲೆ ಚನ್ನಪಟ್ಟಣದಲ್ಲಿ ನಿಂತು ಮತ ಕೇಳ್ತಿದ್ರಾ ? ಓಆಂ ಅಭ್ಯರ್ಥಿಯಾಗಿ ಯೋಗೇಶ್ವರ್ ಸ್ಪರ್ಧಿಸಿದ್ದರೆ ದೇವೇಗೌಡರು ಹೀಗೆ ವಾರಗಟ್ಟಲೆ ಇದ್ದು ಮತ ಕೇಳ್ತಿದ್ರಾ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆದೆ ಅಂತ ದೇವೇಗೌಡರಿಗೆ ಹೊಟ್ಟೆಯುರಿ. ಅದಕ್ಕೇ ನಮ್ಮ ಸರ್ಕಾರ ಕಿತ್ತಾಕುತ್ತೇವೆ ಎನ್ನುತ್ತಿದ್ದಾರೆ. ರಾಜ್ಯದ ಜನತೆ ಆರಿಸಿರುವ ನಮ್ಮ ಸರ್ಕಾರವನ್ನು ಕುಮಾರಸ್ವಾಮಿ, ದೇವೇಗೌಡರಿಂದ ಕೀಳಲು ಸಾಧ್ಯವಿಲ್ಲ. ನಿಮ್ಮ ಹೊಟ್ಟೆಯುರಿ ನಿಮ್ಮನ್ನೇ ಸುಡತ್ತೆ ಹೊರತು ನಮ್ಮನ್ನು ಏನೂ ಮಾಡಲು ಸಾಧ್ಯವಿಲ್ಲ ದೇವೇಗೌಡರೇ ಎಂದರು.

ಮೊದಲ ಬಾರಿ ಸಿಎಂ ಆಗಿ ಹತ್ತು ಹಲವು ಭಾಗ್ಯಗಳನ್ನು ನೀಡಿದೆ. ಎರಡನೇ ಬಾರಿ ಸಿಎಂ ಆಗಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ನಮ್ಮ ಸಾಧನೆಯ ಸಾಕ್ಷಿ ರಾಜ್ಯದ ಜನತೆಯ ಎದುರಿಗೆ ಇಟ್ಟಿದ್ದೀವಿ. ನೀವು ಏನು ಸಾಧನೆ ಮಾಡಿದ್ದೀರಿ ಅಂತ ಚನ್ನಪಟ್ಟಣ ಜನತೆಯ ಎದುರು ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಿದ್ದೀರಿ ಎಂದು ಪ್ರಶ್ನಿಸಿದರು.

೪೦೦ ಕೋಟಿ ವೆಚ್ಚದ ಹಾಲಿನ ಪುಡಿ ಘಟಕ ಮಾಡಿದ್ದು ನಾವು. ಕನಕಪುರದಲ್ಲಿ ೨೦೧೬ ರಲ್ಲಿ ಡೈರಿ ಸಂಕೀರ್ಣವನ್ನು ೭೦೦ ಕೋಟಿ ರೂ ವೆಚ್ಚದಲ್ಲಿ ಮಾಡಿದ್ದು ನಾವು. ಇಂಥವು ಇನ್ನೂ ಪಟ್ಟಿ ದೊಡ್ಡದಿದೆ. ಕುಮಾರಸ್ವಾಮಿ ಅವರು ಇಂಥಾ ಒಂದೇ ಒಂದನ್ನು ಮಾಡಿದ್ದಾರಾ ಹೇಳಿ ದೇವೇಗೌಡರೇ . ಇದನ್ನು ಚನ್ನಪಟ್ಟಣ ಜನತೆ ಕೂಡ ಕೇಳಬೇಕು ಎಂದು ಕರೆ ನೀಡಿದರು.

RELATED ARTICLES
- Advertisment -
Google search engine

Most Popular