ಕೆ.ಆರ್.ನಗರ : ತಾಲೂಕಿನ ಲಾಲನಹಳ್ಳಿ ಗ್ರಾಮದ ಶ್ರೀ ಸಿದ್ದೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ವಿಚಾರವಾಗಿ ಲಾಲನಹಳ್ಳಿ ಗ್ರಾಮ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು ಎಚ್ಚೆತ್ತ ಪೊಲೀಸರು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಮೂರು ಪೊಲೀಸ್ ತುಕಡಿಗಳುನ್ನು ನಿಯೋಜಿಸಲಾಗಿತ್ತು.
ಗ್ರಾಮದ ದೇವಸ್ಥಾನ ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ತಮ್ಮ ಪಕ್ಷದ ಪರವಾಗಿ ಜೈಕಾರದ ಘೋಷಣೆಗಳನ್ನು ಕೂಗಿದರು. ಬಳಿಕ ಪೊಲೀಸರು ಎರಡು ಪಕ್ಷದವರನ್ನು ಮನವೊಲಿಸಿ ಅಲ್ಲಿಂದ ಕಳುಹಿಸಿದರು.
ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಲಾಲನಹಳ್ಳಿ ಗ್ರಾಮಕ್ಕೆ ಜೆಡಿಎಸ್ ಮುಖಂಡರೊಂದಿಗೆ ಆಗಮಿಸಿ ತಹಸೀಲ್ದಾರ್ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಹಣ ಬಿಡುಗಡೆ ಮಾಡಿಸಿ ಈಗಾಗಲೇ ಗುದ್ದಲಿ ಪೂಜೆಯನ್ನು ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಶಾಸಕರಾಗಿದ್ದ ವೇಳೆಯಲ್ಲಿ ಮಾಡಲಾಗಿದ್ದು ಅಲ್ಲದೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ವತಿಯಿಂದ ಜೀರ್ಣೋದ್ಧಾರ ಕಾಮಗಾರಿಯ ಕೆಲಸ ನಡೆದು ಪೂರ್ಣಗೊಳ್ಳುತ್ತಿದೆ ಆದರೆ ಪುನಃ ದೇವಸ್ಥಾನದ ಕಾಮಗಾರಿಗೆ ಶಾಸಕರು ಗುದ್ದಲಿ ಪೂಜೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ ಅವರು ಈ ಸಂಬಂದ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಲಾಗುವುದು, ಇದು ಜನರ ತೆರಿಗೆ ಹಣ ಆದ್ದರಿಂದ ಅನ್ಯಾಯವಾಗದಂತೆ ತಡೆಗಟ್ಟಲು ಜೆಡಿಎಸ್ ಪಕ್ಷದ ಕಾರ್ಯಕರ್ತರ ಜೊತೆಗೂಡಿ ಹೋರಾಟ ಮಾಡುತ್ತೇವೆ ಎಂದರು.
ತಾಲೂಕು ಜಾದಳ ಅಧ್ಯಕ್ಷ ಹಂಪಾಪುರ ಕುಮಾರ್, ಪ್ರಧಾನ ಕಾರ್ಯದರ್ಶಿ ಲಾಲನಹಳ್ಳಿ ಮಹೇಶ್, ನಗರ ಕಾರ್ಯದರ್ಶಿ ರುದ್ರೇಶ್, ಯುವ ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಕಗ್ಗರೆ ಕುಚೇಲ, ವಕೀಲ ಅಂಕನಹಳ್ಳಿ ತಿಮ್ಮಪ್ಪ, ತಾ.ಜಾದಳ ವಕ್ತಾರ ಕೆ.ಎಲ್.ರಮೇಶ್, ಜಾದಳ ಮುಖಂಡರಾದ ಶಂಭು, ಅನೀಫ್ ಗೌಡ, ಮಾರ್ಕಂಡೇಯ, ಕಲ್ಲಹಳ್ಳಿ ಸೋಮಣ್ಣ, ತಿಪ್ಪೂರು ವಿಷ್ಣು ಮೊದಲಾದವರು ಇದ್ದರು.



