Sunday, April 20, 2025
Google search engine

Homeಅಪರಾಧಗುಡಿಬಂಡೆ: ಕಾರು ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿಗಳು ಸಾವು

ಗುಡಿಬಂಡೆ: ಕಾರು ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿಗಳು ಸಾವು

ಗುಡಿಬಂಡೆ: ನಗರಗೆರೆ ಬಳಿಯ‌ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ನುಗ್ಗಿದ ಪರಿಣಾಮ ಕಾರಿನಲ್ಲಿದ್ದ ನಾಲ್ಕು ಜನರಲ್ಲಿ ಮೂವರು ಸಾವನ್ನಪ್ಪಿದ್ದು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಜೂ.7ರ ಶುಕ್ರವಾರ ಮುಂಜಾನೆ ನಡೆದಿದೆ.

ಅಪಘಾತದಲ್ಲಿ ವಾಟದಹೊಸಹಳ್ಳಿ ಬೆಸ್ಕಾಂ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಬೆಸ್ಕಾಂ ಲೈನ್ ಮ್ಯಾನ್ ಗಳಾದ ಶ್ರೀಧರ್ (28), ವೇಣು ಗೋಪಾಲ್ (38), ಮಂಜುನಾಥ್ (37) ಎಂಬವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಶಿವಕುಮಾರ್ ಎಂಬವರಿಗೆ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ರಾತ್ರಿ ಗೌರಿಬಿದನೂರು ತಾಲೂಕಿನ ನಗರಗೆರೆ-ವಾಟದಹೊಸಹಳ್ಳಿ ರಸ್ತೆಯಲ್ಲಿ ವೇಣುಗೋಪಾಲ್ ಅವರು ಕಾರಿನಲ್ಲಿ ಬರುವಾಗ ಕಾರು ಆಯತಪ್ಪಿ ರಸ್ತೆಯ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದು ಮತ್ತೋರ್ವನ‌ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿಲಾಗಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತ ದೇಹಗಳನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.

RELATED ARTICLES
- Advertisment -
Google search engine

Most Popular