Tuesday, June 16, 2026
Google search engine

Homeರಾಜ್ಯಸುದ್ದಿಜಾಲನೀಟ್ ಮರು ಪರೀಕ್ಷೆಯಲ್ಲಿ ಮಾರ್ಗಸೂಚಿ ಕಟ್ಟುನಿಟ್ಟಿನ ಪಾಲನೆಯಾಗಲಿ: ಜಿಲ್ಲಾಧಿಕಾರಿ ಡಾ ಕುಮಾರ

ನೀಟ್ ಮರು ಪರೀಕ್ಷೆಯಲ್ಲಿ ಮಾರ್ಗಸೂಚಿ ಕಟ್ಟುನಿಟ್ಟಿನ ಪಾಲನೆಯಾಗಲಿ: ಜಿಲ್ಲಾಧಿಕಾರಿ ಡಾ ಕುಮಾರ

ಮಂಡ್ಯ: ನೀಟ್ ಮರು ಪರೀಕ್ಷೆಯು ಜೂ.21ರಂದು ನಡೆಯಲಿದ್ದು, ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಪಾರದರ್ಶಕ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ ಕುಮಾರ ಅವರು ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ನಡೆಯುವ ನೀಟ್ ಪರೀಕ್ಷೆಗೆ 1958 ವಿದ್ಯಾರ್ಥಿಗಳು ಹಾಜರಾಗಲಿದ್ದು, 4 ಪರೀಕ್ಷೆ ಕೇಂದ್ರಗಳಾದ ಪಿ. ಇ.ಎಸ್ ಇಂಜಿನಿಯರಿಂಗ್ ಕಾಲೇಜು ಮಂಡ್ಯ, ಪಿ.ಇ.ಎಸ್ ವಿಜ್ಞಾನ ಕಲಾ ಮತ್ತು ವಾಣಿಜ್ಯ ಕಾಲೇಜು ಮಂಡ್ಯ, ಸರ್ಕಾರಿ ಮಹಿಳಾ ಕಾಲೇಜು ಮಂಡ್ಯ ಹಾಗೂ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು( ಕಲ್ಲು ಕಟ್ಟಡ) ಮಂಡ್ಯ ಈ ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆಯಲ್ಲಿದೆ.

ಪರೀಕ್ಷೆ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದಂತಹ ಮೂಲಸೌಕರ್ಯ ವ್ಯವಸ್ಥೆಗಳು ಇರುವುದನ್ನು ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮುಂಚಿತವಾಗಿ ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕು ಎಂದರು.

ಪರೀಕ್ಷೆ ನಡೆಯುವ ದಿನದಂದು ವಿದ್ಯುತ್ ವ್ಯತ್ಯಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯಲ್ಲಿ ಯಾವುದೇ ಲೋಪಗಳು ಕಂಡುಬಾರದಂತೆ, ಪರಸ್ಪರ ಸಮನ್ವಯದಿಂದ ಕರ್ತವ್ಯ ನಿರ್ವಹಿಸುವಂತೆ ಹಾಗೂ ವಿವಿಧ ಇಲಾಖೆಗಳು ಪರೀಕ್ಷೆಯ ಅವಧಿಯಲ್ಲಿ ಅಗತ್ಯ ಸಹಕಾರ ನೀಡುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ಶೋಭಾರಾಣಿ, ಮಂಡ್ಯ ಉಪ ವಿಭಾಗಧಿಕಾರಿ ಶಿವಮೂರ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular