Sunday, April 20, 2025
Google search engine

Homeಸ್ಥಳೀಯಗುಂಡ್ಲುಪೇಟೆ: ಡಾ.ಬಾಬು ಜಗಜೀವನ್ ರಾಂ 37ನೇ ಪುಣ್ಯ ಸ್ಮರಣೆ

ಗುಂಡ್ಲುಪೇಟೆ: ಡಾ.ಬಾಬು ಜಗಜೀವನ್ ರಾಂ 37ನೇ ಪುಣ್ಯ ಸ್ಮರಣೆ

ಗುಂಡ್ಲುಪೇಟೆ: ಪಟ್ಟದ ತಾಲೂಕು ಕಚೇರಿ ಸಭಾ ಭವನದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ 37ನೇ ಪುಣ್ಯ ಸ್ಮರಣೆ ಆಚರಣೆ ಮಾಡಲಾಯಿತು.

ಡಾ.ಬಾಬು ಜಗಜೀವನ್ ರಾಂ ಭಾವಚಿತ್ರಕ್ಕೆ ತಹಸೀಲ್ದಾರ್ ಶ್ರೀಶೈಲ ಯಮನಪ್ಪ ತಳವಾರ್ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ತಹಸೀಲ್ದಾರ್ ಶ್ರೀಶೈಲ ಯಮನಪ್ಪ ತಳವಾರ್, ಡಾ.ಬಾಬು ಜಗಜೀವನ್ ರಾಂ ಹಸಿರು ಕಾಂತ್ರಿ ಮಾಡುವ ಮೂಲಕ ಆಹಾರ ಕ್ಷಾಮವನ್ನು ತಪ್ಪಿಸಿದರು. ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.

ಹಸಿರು ಕ್ರಾಂತಿಯ ಹರಿಕಾರರಾಗಿದ್ದ ಡಾ.ಬಾಬು ಜಗಜೀವನರಾಂ ಅಂದಿನ ಕೇಂದ್ರ ಸರ್ಕಾರದಲ್ಲಿ ಕಾರ್ಮಿಕ, ರೈಲ್ವೆ, ಕೃಷಿ ಮುಂತಾದ ಖಾತೆಗಳ ಮಂತ್ರಿಯಾಗಿ ಆ ಕ್ಷೇತ್ರಗಳಿಗೆ ವಿಶಿಷ್ಟ ಕೊಡುಗೆಗಳನ್ನು ನೀಡಿದ್ದಾರೆ. ಶೋಷಿತ ಸಮುದಾಯದಿಂದ ಬಂದವರಾಗಿದ್ದ ಅವರು ತಳಸಮುದಾಯ ಜನರನ್ನು ಆತ್ಮವಿಶ್ವಾಸ, ಸ್ವಾಭಿಮಾನಗಳಿಂದ ಬದುಕಲು ಪ್ರೇರೇಪಿಸುತ್ತಿದ್ದರು ಎಂದು ಹೇಳಿದರು.

ದೇಶದ ಆಹಾರ ಉತ್ಪಾದನೆಯಲ್ಲಿ ಕಳೆದ ನಾಲ್ಕು ದಶಕಗಳಲ್ಲಿ 4 ಪಟ್ಟು ಅಧಿಕವಾಗಿದೆ. ಇಂದು ಆಹಾರ ಉತ್ಪಾದನೆಯಲ್ಲಿ ದೇಶ ಸ್ವಾವಲಂಬನೆ ಸಾಧಿಸಿದೆ ಎಂದರೆ ಅದರಲ್ಲಿ ಜಗಜೀವನರಾಂ ಅವರ ಪಾತ್ರ ಹೆಚ್ಚಾಗಿದೆ. ಆದ್ದರಿಂದ ಅವರು ಹಾಕಿಕೊಟ್ಟ ಹಾದಿಯಲ್ಲಿ ಎಲ್ಲರೂ ನಡೆಯಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನಂಜುಂಡೇಗೌಡ, ಪಶು ಪಾಲನಾ ಇಲಾಖೆ ಸಹಾಯ ನಿರ್ದೇಶಕ ಡಾ.ಮೋಹನ್ ಕುಮಾರ್, ಸರ್ವೇ ಇಲಾಖೆಯ ರಮೇಶ್ ನಾಯಕ್, ಮುಖಂಡರಾದ ಸುಭಾಷ್ ಮಾಡ್ರಹಳ್ಳಿ, ಸೋಮಣ್ಣ, ನಾಗಯ್ಯ ಸೇರಿದಂತೆ ಇತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular