ಗುಂಡ್ಲುಪೇಟೆ: ಜಮೀನಿನಲ್ಲಿ ಅಳವಡಿಕೆ ಮಾಡಿದ್ದ ವಿದ್ಯುತ್ ತಂತಿಗೆ ಸಿಲುಕಿ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಅಭಯಾರಣ್ಯದ ಓಂಕಾರ ವಲಯ ವ್ಯಾಪ್ತಿಯ ಕುರುಬರ ಹುಂಡಿ ಗ್ರಾಮದಲ್ಲಿ ನಡೆದಿದೆ..
ಕುರುಬರಹುಂಡಿ ಗ್ರಾಮದ ಶಿವರಾಜಪ್ಪ ಎಂಬುವವರು ಜಮೀನಿನಲ್ಲಿ ಅಕ್ರಮವಾಗಿ ಅಳವಡಿಕೆ ಮಾಡಿದ್ದ ವಿದ್ಯುತ್ ತಂತಿಗೆ ಆಹಾರ ಅರಸಿ ಕಾಡಿನಿಂದ ಬಂದ ಆನೆ ಸಿಲುಕಿ ಭಾನುವಾರ ತಡ ರಾತ್ರಿ ಮೃತಪಟ್ಟಿದೆ ಎನ್ನಲಾಗುತ್ತಿದೆ.
ಈ ಸಂಬಂಧ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.