ಗುಂಡ್ಲುಪೇಟೆ: ಗುಂಡ್ಲುಪೇಟೆ ಪುರಸಭೆ ವ್ಯಾಪ್ತಿಯಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡಲು ಅನುದಾನ ಬಿಡುಗಡೆ ಮಾಡಲಾಗಿದ್ದು, ಶೌಚಾಲಯ ರಹಿತ ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೌಚಾಲಯ ನಿರ್ಮಾಣ ಮಾಡಲು ಸ್ಥಳಾವಕಾಶವಿರುವ ಫಲಾನುಭವಿಗಳು ಡಿಸೆಂಬರ್ 08 ರೊಳಗೆ ಪುರಸಭೆ ಕಛೇರಿಗೆ ಅರ್ಜಿ ಸಲ್ಲಿಸಬಹುದು.
ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ಶೌಚಾಲಯ ನಿರ್ಮಾಣದ ವೆಚ್ಚವನ್ನು ಹಂತ ಹಂತವಾಗಿ ತಮ್ಮ ಖಾತೆಗಳಿಗೆ ಜಮಾ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಆರೋಗ್ಯ ಶಾಖೆಯನ್ನು ಸಂಪರ್ಕಿಸಲು ಸೂಚಿಸುತ್ತಾ ಸ್ವಚ್ಛ ಹಾಗೂ ಬಯಲು ಶೌಚಮುಕ್ತ ಪಟ್ಟಣವನ್ನಾಗಿಸಲು ಪ್ರತಿಯೊಬ್ಬರು ಪುರಸಭೆಯೊಂದಿಗೆ ಕೈ ಜೋಡಿಸಬೇಕಾಗಿ ಎಂದು ಪುರಸಭೆಯ ಮುಖ್ಯಾಧಿಕಾರಿ ವಸಂತಕುಮಾರಿರವರು ಸಾರ್ವಜನಿಕರಿಗೆ ಮನವಿ ಮಾಡಿರುತ್ತಾರೆ.