Saturday, April 19, 2025
Google search engine

Homeಅಪರಾಧಗುರುಗ್ರಾಮ: ಹುಚ್ಚ ಎಂದು ಕರೆದಿದ್ದಕ್ಕೆ ತಾಯಿಯನ್ನೇ ಕೊಂದ ಮಗ

ಗುರುಗ್ರಾಮ: ಹುಚ್ಚ ಎಂದು ಕರೆದಿದ್ದಕ್ಕೆ ತಾಯಿಯನ್ನೇ ಕೊಂದ ಮಗ

ಮಗನನ್ನು ಕೋಪದಲ್ಲಿ ಹುಚ್ಚ ಎಂದು ಕರೆದಿದ್ದಕ್ಕೆ ತಾಯಿಯನ್ನು ಮಾನಸಿಕ ಅಸ್ವಸ್ಥ ಮಗನೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.

ರಾನು ಶಾ ತನ್ನ ಪತಿ ಮತ್ತು ಮಗನೊಂದಿಗೆ ಗುರುಗ್ರಾಮದ ಸೆಕ್ಟರ್ 48 ರಲ್ಲಿ ಐಷಾರಾಮಿ ಅಪಾರ್ಟ್ಮೆಂಟ್ ಸಂಕೀರ್ಣವಾದ ವಿಪುಲ್ ಗ್ರೀನ್ಸ್‌ ನಲ್ಲಿ ವಾಸಿಸುತ್ತಿದ್ದರು. ಆಕೆಯ ಮಗ ಅತ್ರಿಶ್ ಮಾನಸಿಕ ಅಸ್ವಸ್ಥನಾಗಿ ಬಹಳ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಆತನ ಪೋಷಕರೊಂದಿಗೆ ಆಗಾಗ ಜಗಳ ನಡೆಯುತ್ತಿದ್ದ ಎಂದು ನೆರೆಹೊರೆಯವರು ತಿಳಿಸಿದ್ದಾರೆ.

ನಿನ್ನೆ ತಡರಾತ್ರಿ ಅವರ ಫ್ಲ್ಯಾಟ್ ​ನಿಂದ ಹೊಗೆ ಬರುತ್ತಿರುವುದನ್ನು ಕಂಡ ನೆರೆಹೊರೆಯವರು ತಕ್ಷಣ ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಕರೆ ಮಾಡಿದ್ದಾರೆ. ಅವರು ಬಾಗಿಲು ಒಡೆದು ಒಳಗೆ ಹೋದಾಗ ಶಾ ಅವರು ಸುಟ್ಟ ಗಾಯಗಳಿಂದ ನರಳುತ್ತಿದ್ದರು. ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂಬುದು ತಿಳಿದುಬಂದಿದೆ.

ಪೊಲೀಸರ ಪ್ರಕಾರ, ಪ್ರಾಥಮಿಕ ತನಿಖೆಯ ಪ್ರಕಾರ ಅತ್ರಿಶ್ ಆಗಾಗ ಉದ್ರೇಕಗೊಂಡು ತನ್ನ ತಾಯಿಯ ಮೇಲೆ ಹಲ್ಲೆ ಮಾಡುತ್ತಿದ್ದ. ಕೋಪದಲ್ಲಿ ಆತನನ್ನು ಹುಚ್ಚ ಎಂದು ತಾಯಿ ಕರೆದಿದ್ದಾರೆ. ಅದಕ್ಕೆ ಕೋಪಗೊಂಡು ಪದೇ ಪದೇ ಆಕೆಗೆ ಚಾಕುವಿನಿಂದ ಇರಿದಿದ್ದಾನೆ. ಬಳಿಕ ಅವರ ಮನೆಗೆ ಬೆಂಕಿ ಹಚ್ಚಿದ್ದಾನೆ.

RELATED ARTICLES
- Advertisment -
Google search engine

Most Popular