ನಾಗಮಂಗಲ:ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಗುರುಪೂರ್ಣಿಮೆ ಪ್ರಯುಕ್ತ ಶ್ರೀ ಮಠದ ದೇವಾಲಯಗಳಲ್ಲಿ ಹೋಮ, ಅಭಿಷೇಕ,ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು.
ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾ
ನಂದನಾಥ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ನೆರವೇರಿಸಿದರು.
ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠಗಳ ಪೂಜ್ಯ ಸ್ವಾಮೀಜಿಗಳವರು ಹಾಗೂ ಸದ್ಭಕ್ತರು ಉಪಸ್ಥಿತರಿದ್ದರು.
ಪರಮಪೂಜ್ಯ ಮಹಾಸ್ವಾಮೀಜಿಗಳವರಿಂದ ಭಕ್ತಾದಿಗಳು ಆಶೀರ್ವಾದ ಪಡೆದರು.