ಹೊಸದಿಲ್ಲಿ: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದಾರೆ.
ಹಾಲಿ ಮುಖ್ಯ ಚುನಾವಣಾಯುಕ್ತ ರಾಜೀವ್ ಕುಮಾರ್ ಅವರ ಅಧಿಕಾರವಧಿ ಇಂದು (ಫೆ.18) ಕೊನೆಗೊಳ್ಳಲಿದೆ.
ಕೇರಳ ಕೇಡರ್ ನ ಮಾಜಿ ಐಎಎಸ್ ಅಧಿಕಾರಿಯಾದ ಜ್ಞಾನೇಶ್ ಕುಮಾರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಕಾನೂನು ಸಚಿವ ಅರ್ಜುನ್ ರಾಂಮೇಘವಾಲ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನೊಳಗೊಂಡ ಸಮಿತಿಯು ನೇಮಿಸಿದೆ.
ಜ್ಞಾನೇಶ್ ಕುಮಾರ್ ಅವರು ಸಂಸದೀಯ ವ್ಯವಹಾರ ಹಾಗೂ ಸಹಕಾರಿ ಸಚಿವಾಲಯಗಳಲ್ಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.
ಕೇರಳ ಕೇಡರ್‌ನ 1988 ರ ಬ್ಯಾಚ್ ನ ಐಎಎಸ್ ಅಧಿಕಾರಿಯಾದ ಅವರು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯನ್ನು ಮತ್ತು ಮುಂದಿನ ವರ್ಷ ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ತಮಿಳುನಾಡಿನ ಚುನಾವಣೆಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊಂದಿರಲಿದ್ದಾರೆ.