Friday, April 11, 2025
Google search engine

Homeರಾಜ್ಯಜೆಡಿಎಸ್ ಪಕ್ಷ ಸಂಘಟನೆಗಾಗಿ ಮಾರ್ಚ್ ನಿಂದ ಹೆಚ್.ಡಿ.ದೇವೇಗೌಡರ ರಾಜ್ಯ ಪ್ರವಾಸ

ಜೆಡಿಎಸ್ ಪಕ್ಷ ಸಂಘಟನೆಗಾಗಿ ಮಾರ್ಚ್ ನಿಂದ ಹೆಚ್.ಡಿ.ದೇವೇಗೌಡರ ರಾಜ್ಯ ಪ್ರವಾಸ

ಬೆಂಗಳೂರು: ಜೆಡಿಎಸ್ ಪಕ್ಷ ಸಂಘಟನೆಗಾಗಿ ಮಾರ್ಚ್ ತಿಂಗಳಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಹೇಳಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಅವರು ಮಾತನಾಡಿದರು.

ಪಕ್ಷದ ಸಂಘಟನೆಗೆ ನಾನು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ಮಾರ್ಚ್ ತಿಂಗಳಿಂದ ಜಿಲ್ಲೆಗಳಿಗೆ ಭೇಟಿ ಕೊಡುತ್ತೇನೆ. ಕಾರ್ಯಕರ್ತರು, ಮುಖಂಡರ ಜತೆಗೂಡಿ ಪಕ್ಷ ಸಂಘಟನೆ ಮಾಡುತ್ತೇನೆ ಎಂಬುದಾಗಿ ಮಾಜಿ ಪ್ರಧಾನಿಗಳು ಹೇಳಿದರು.

ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿದ್ದಾರೆ. ಅವರು ದೇಶದ ಉದ್ದಗಲಕ್ಕೂ ಸಂಚಾರ ಮಾಡಿ ಕೆಲಸ ಮಾಡಬೇಕಿದೆ. ನಾನು, ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷದ ಎಲ್ಲಾ ಹಿರಿಯ, ಕಿರಿಯ ಮುಖಂಡರೆಲ್ಲ ಸೇರಿ ಕಾರ್ಯಕರ್ತರ ಪಡೆಯೊಂದಿಗೆ ಪಕ್ಷ ಕಟ್ಟುತ್ತೇವೆ ಎಂದು ಅವರು ಹೇಳಿದರು.

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಕ್ಕೆ ಶಕ್ತಿ ತುಂಬುತ್ತೇವೆ. ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುತ್ತೇವೆ. ಬೆಂಗಳೂರು ನಗರದಲ್ಲಿ ಸ್ಥಳೀಯರ ಮುಖಂಡರ ಜತೆಗೂಡಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ರಾಷ್ಟ್ರೀಯ ಅಧ್ಯಕ್ಷರು ಹೇಳಿದರು.

ಗಣರಾಜ್ಯೋತ್ಸವ ಕಾರ್ಯಕ್ರಮ ಬಹಳ ಅಚ್ಚುಕಟ್ಟಾಗಿ ಮಾಡಿದ್ದೀರಿ. ಕಾರ್ಯಕರ್ತರು ಶಿಸ್ತಿನಿಂದ ಪಾಲ್ಗೊಂಡಿರುವುದು ನನಗೆ ಬಹಳ ಸಂತೋಷ ಉಂಟು ಮಾಡಿದೆ ಎಂದು ಮಾಜಿ ಪ್ರಧಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಗಣರಾಜ್ಯೋತ್ಸವ ಆಚರಣೆ:

ಪಕ್ಷದ ಕಚೇರಿಯಲ್ಲಿ ಮಾಜಿ ಪ್ರಧಾನಿಗಳ ಉಪಸ್ಥಿತಿಯಲ್ಲಿ ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್ ಅವರು 76ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.

ಮಾಜಿ ಶಾಸಕ ಹಾಗೂ ಹಿರಿಯ ನಾಯಕರಾದ ನಾರಾಯಣ ರಾವ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಸೇರಿದಂತೆ ಬೆಂಗಳೂರು ನಗರದ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರುಗಳು, ಮಹಿಳಾ ಜನತಾದಳ ಮುಖಂಡರು ಸೇರಿ ನೂರಾರು ಸಂಖ್ಯೆಯಷ್ಟು ಕಾರ್ಯಕರ್ತರು ಉಪ್ಥಿತರಿದ್ದರು.

RELATED ARTICLES
- Advertisment -
Google search engine

Most Popular